ಬೆಳಗಾವಿ :ರಾಜ್ಯದ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶದಲ್ಲಿ ಮುಂಚೂಣಿ ಸ್ಥಾನದಲ್ಲಿರುವ ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಹೆರಿನಲ್ಲಿ ಪ್ರತಿಷ್ಠಾನ ಸ್ಥಾಪನೆ, ಕೈಗಾರಿಕಾ ಪಾರ್ಕ್ ಸ್ಥಾಪನೆ, ಹೊಸ ಮತ್ಸೃದರ್ಶಿನಿ ಸ್ಥಾಪನೆ, ನಗರದ ಮಾಸ್ಟರ್ ಪ್ಲಾನ್ ನಂತಹ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಿದ್ದಾರೆ.
ಕಿತ್ತೂರು ಕರ್ನಾಟಕ ಭಾಗದಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗಾಗಿ ಜಿಲ್ಲೆಯಲ್ಲಿ 1,000 ಎಕರೆ ಕೈಗಾರಿಕಾ ಪಾರ್ಕ್ ನಿರ್ಮಾಣ, ಬೆಳಗಾವಿ ವಿಭಾಗದಲ್ಲಿ ಕುರಿ, ಮೇಕೆ ಘಟಕ ಸ್ಥಾಪನೆ, ಅಥಣಿಯಲ್ಲಿನ ಕೃಷಿ ಕಾಲೇಜು ಸ್ಥಾಪಿಸಲು ಅಗತ್ಯವಿರುವ ಪ್ರಥಮ ಹಂತದಲ್ಲಿ ಮೂಲಸೌಕರ್ಯ ಒದಗಿಸಲು ಕ್ರಮ ವಹಿಸಿದೆ.
ಮೀನು ಆಹಾರ ಸೇವನೆ ಉತ್ತೇಜಿಸಲು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನ ಲಭ್ಯವಾಗುವಂತೆ ಮಾಡಲು ಬೆಳಗಾವಿಯಲ್ಲಿ ಮತ್ಸೃದರ್ಶಿನಿ ಸ್ಥಾಪನೆ.ನಗರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪನೆ. ಡಾ.ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ ಸ್ಥಳದಲ್ಲಿ ಅವರ ಹೆಸರಿನಲ್ಲಿ ಸಿಬಿಎಸ್‌ಸಿ ಪಠ್ಯಕ್ರಮದ ಕ್ರೈಸ್ ವಸತಿ ಶಾಲೆ ಪ್ರಾರಂಭ.ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ 150 ಸಂಖ್ಯಾಬಲದ ಮೇಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಸ್ಥಾಪನೆ. ಸಶಕ್ತ ಕರ್ನಾಟಕ ಕಾರ್ಯಕ್ರಮ ಅಡಿಯಲ್ಲಿ ಬೆಳಗಾವಿಯಲ್ಲಿ 4 ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ದ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ.
ಕುಸ್ತಿ ಪಟುಗಳನ್ನು ಪ್ರೋತ್ಸಾಹಿಸಲು ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಾಣ, ಬೈಲಹೊಂಗಲದಲ್ಲಿ ಪ್ರಜಾಸೌಧ ನಿರ್ಮಾಣ,ಬೆಳಗಾವಿಯ ಸುವರ್ಣ ವಿಧಾನಸೌಧ ನಡೆಯುವ ವಿಧಾನಮಂಡಲ ಅಧಿವೇಶನ ಬಂದೋಬಸ್ತ್ ಕಾರ್ಯಕ್ಕೆ ಸಿಬ್ಬಂದಿ ವಸತಿ ಸೌಲಭ್ಯ ಒದಗಿಸುವುದಕ್ಕಾಗಿ 20 ಕೋಟಿ ರೂ. ವೆಚ್ಚದಲ್ಲಿ 1ಸಾವಿರ ರೂ. ಸಿಬ್ಬಂದಿ ಶಾಶ್ವತ್ ಬ್ಯಾರಕ್‌ಗಳ ನಿರ್ಮಾಣ, ಕಾರ್ಮಿಕ ಇಲಾಖೆಯಡಿ ಬೈಲಹೊಂಗಲ, ಯಮಕನಮರಡಿ, ರಾಮದುರ್ಗ, ಅಥಣಿಯಲ್ಲಿ ಶ್ರಮಿಕ ವಸತಿ ಶಾಲೆ, ಯರಗಟ್ಟಿಯಲ್ಲಿ ಪೊಲೀಸ್ ಠಾಣೆ ಸ್ಥಾಪನೆ, ಹುಕ್ಕೇರಿ ತಾಲೂಕಿನ ಸಂಕೇಶ್ವರ- ಮುಧೋಳ ತಾಲೂಕಿನ ಲೋಕಾಪುರ ನಡುವಿನ 100 ಕಿಮೀ ರಸ್ತೆ ಮೇಲ್ದರ್ಜೆಗೆ ಹಾಗೂ ಶ್ರೀಶೈಲಂ ಕ್ಷೇತ್ರದಲ್ಲಿ ಹೊಸದಾಗಿ ಯಾತ್ರಿನಿವಾಸ ನಿರ್ಮಾಣ ಮಾಡುವ ಘೋಷಣೆ ಮಾಡಿದ್ದಾರೆ.
ಮುಕ್ತಾಯಗೊಳಿಸಲು ಉದ್ದೇಶಿಸಿರುವ ಯೋಜನೆಗಳು
* ಬಸವೇಶ್ವರ (ಕೆಂಪವಾಡ )ಏತ ನಿರಾವರಿ
ಆಡಳಿತಾತ್ಮಕ ಅನುಮೋದನೆ ಸಿಕ್ಕ ಕಾಮಗಾರಿಗಳು
* ನವಿಲುತೀರ್ಥ ಆಣೆಕಟ್ಟಿನ ಕೆಳಭಾಗದಲ್ಲಿ ಮಲಪ್ರಭಾ ನದಿಗೆ ಆಕ್ವೆಡಕ್ಟ್ ನಿರ್ಮಾಣ
* ರಾಮದುರ್ಗ ತಾಲೂಕಿನ ಗ್ರಾಮಗಳಿಗೆ ನೀರು ತುಂಬಿಸುವ ಯೋಜನೆ.
* ರಾಮದುರ್ಗ ತಾಲೂಕಿನ ಗೊಣ್ಣಾಗರ ಗ್ರಾಮದ ಬಳಿ ಮಲಪ್ರಭಾ ನದಿಯಿಂದ ಕೊರೆದ ಭಾಗಕ್ಕೆ ತಡೆಗೋಡೆ ನಿರ್ಮಾಣ
* ಯರಗಟ್ಟಿ ಏತ ನೀರಾವರಿ ಯೋಜನೆ
* ರೇಣುಕಾ ಏತ ನೀರಾವರಿ ಯೋಜನೆ
* ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಬಳಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ
*ಯರಗಟ್ಟಿ ತಾಲೂಕಿನ ದಾಸನಾಳ ಇಂಗು ಕೆರೆ ಸುಧಾರಣೆ
*ಸವದತ್ತಿ ತಾಲೂಕಿನ ಹಂಚಿನಾಳದಲ್ಲಿ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ