ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು. ದೀಪಕ ಗುಡಗನಟ್ಟಿ, ಸುರೇಶ ಗವನ್ನವರ,ಗಣೇಶ ರೋಕಡೆ, ಹೊಳೆಪ್ಪ ಸುಲದಾಳ ಇತರರಿದ್ದರು.
ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ, ಪಾಲಿಕೆ ಮೇಲ್ದರ್ಜೆಗೇರಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯಗೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಮನವಿ ಸಲ್ಲಿಸಿದರು.
ಮಹಾನಗರ ಪಾಲಿಕೆಯಲ್ಲಿ ನಾಡನುಡಿಗೆ ಮೊದಲ ಆದ್ಯತೆ ನೀಡುವ ಕೆಲಸವು ಆಡಳಿತ ಮಂಡಳಿಗಳಿಂದ ಆಗುತ್ತಿಲ್ಲ. ಕನ್ನಡ ಬಳಕೆ ಸಂಪೂರ್ಣ ನಿರ್ಲಕ್ಷಿಸಿಕೊಂಡು ಬರುತ್ತಿದ್ದಾರೆ. ಹೀಗಾಗಿ ಪಾಲಿಕೆಯಲ್ಲಿ ಕನ್ನಡ ಬಳಕೆ ಕಡ್ಡಾಯ ಜತೆಗೆ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚನ್ನಮ್ಮಾ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಕ್ರಮ ಜರುಗಿಸಬೇಕು.
ಮಹಾನಗರ ನಾಲ್ಕು ದಿಕ್ಕುಗಳಲ್ಲಿ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಜನ ವಸತಿ ಪ್ರದೇಶದ ವಿಸ್ತರಣೆಯಾಗುತ್ತಿದೆ. ಬೆಳಗಾವಿ ಮಹಾನಗರ ಮೆಟ್ರೋಪಾಲಿಟನ ನಗರವಾಗುವತ್ತ ದಾಪುಗಾಲು ಹಾಕುತ್ತಿರುವ ಹಿನ್ನೆಲೆ ಬೆಳವಣಿಗೆಗೆ ತಕ್ಕಂತೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿರಿಸಿ ಬೃಹತ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ,ಗಣೇಶ ರೋಕಡೆ, ಹೊಳೆಪ್ಪ ಸುಲದಾಳ ಇತರರಿದ್ದರು.
ಬೆಳಗಾವಿಯು ಶಿಕ್ಷಣ, ಕೈಗಾರಿಕೆ ಹಾಗೂ ಭೌಗೋಳಿಕವಾಗಿ ಅತ್ಯಂತ ಸೂಕ್ತ ಪ್ರದೇಶವಾಗಿದ್ದು, ಐಟಿ-ಬಿಟಿ ಕಂಪನಿಗಳ ಸ್ಥಾಪನೆಯಿಂದ ಸಾವಿರಾರು ಸ್ಥಳೀಯ ಯುವಕರಿಗೆ ಉದ್ಯೋಗ ದೊರೆಯುವುದರ ಜೊತೆಗೆ ನಗರದ ಆರ್ಥಿಕ ಬೆಳವಣಿಗೆಗೆ ಹೊಸ ಉತ್ತೇಜನ ಸಿಗಲಿದೆ. ಅಲ್ಲದೆ, ಐಟಿ ಪಾರ್ಕ್, ಅಗತ್ಯ ಮೂಲಸೌಕರ್ಯ ಹಾಗೂ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಬೆಳಗಾವಿಯನ್ನು ಉತ್ತರ ಕರ್ನಾಟಕದ ಪ್ರಮುಖ ತಂತ್ರಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಪ್ರವೀಣ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮನವಿ ಸಲ್ಲಿಸಿದರು.
ರಾಜೇಶ ಗಲ್ಗಲಿ, ಸೂರಜ್, ರಾಜು ಕಲ್ಪತ್ರಿ, ಗಿರಿಜಾ, ಝೋಯೆಲ್, ಉಮಾ ವಾಜಂತ್ರಿ, ನಾಗನಗೌಡ ಪಾಟೀಲ ಇತರರಿದ್ದರು.