ಚಿಕ್ಕೋಡಿಯ ಬಸವಪ್ರಭು ಕೋರೆ ಕಾಲೇಜಿನಲ್ಲಿ ಗುರುವಾರ ವಾರ್ಷಿಕ ಪರಿಮಳ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸುಭಾಸ ಸಂಪಗಾವಿ, ರಾಜೇಶ ಬುರ್ಲಿ, ಎಸ್.ಎಸ್.ಕವಲಾಪುರೆ, ಎನ್.ಎಸ್.ವಂಟಮುತ್ತೆ, ಡಾ.ಬಿ.ಜಿ.ಕುಲಕರ್ಣಿ ಇತರರಿದ್ದರು.  
ಬೆಳಗಾವಿ

ವಿದ್ಯಾರ್ಥಿಗಳು ಮೊಬೈಲ್ ದಾಸರಾಗಬೇಡಿ

ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಸಾಧನೆ ಮಾಡಬೇಕು. ಜೀವನದಲ್ಲಿ ಶಿಕ್ಷಣದ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ ಎಂದು ಚಿಕ್ಕೋಡಿ ಉಪವಿಭಾಗದ ಸಹಾಯಕ ಆಯುಕ್ತ ಹಾಗೂ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ ಹೇಳಿದರು.

ಚಿಕ್ಕೋಡಿ

ತಹಸೀಲ್ದಾರ ರಾಜೇಶ ಬುರ್ಲಿ ಮಾತನಾಡಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಹಾಗೂ ಸೃಜನಶೀಲತೆಯನ್ನು ವೃದ್ಧಿಸುತ್ತವೆ. ಜೀವನದಲ್ಲಿ ಯಶಸ್ಸು ಸಾಧಿಸಲು ಶಿಕ್ಷಣದೊಂದಿಗೆ ಉತ್ತಮ ನಡತೆ, ಶಿಸ್ತು ಮತ್ತು ಪರಿಶ್ರಮವೂ ಅತ್ಯಗತ್ಯ ಎಂದರು.
ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಎಸ್.ಎಸ್.ಕವಲಾಪುರೆ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಎನ್.ಎಸ್.ವಂಟಮುತ್ತೆ, ಉಪ ಪ್ರಾಚಾರ್ಯ ಸುಧೀರ ಕೋಠಿವಾಲೆ, ಐಕ್ಯೂಎಸಿ ಸಂಯೋಜಕ ಡಾ.ಸಿದ್ಧಲಿಂಗ ಮಟ್ಟಪ್ಪನವರ, ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ ವಾಘಮೊರೆ, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ಇದೇ ಸಂದರ್ಭದಲ್ಲಿ 2025-2026 ನೇ ಸಾಲಿನ ವಾರ್ಷಿಕ ಪರಿಮಳ ಸಂಚಿಕೆ ಬಿಡುಗಡೆ ಮಾಡಲಾಯಿತು. ಪ್ರಾಂಶುಪಾಲ ಡಾ.ಬಿ.ಜಿ.ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾವನಾ ಕಾಂಬಳೆ, ಶ್ರೀರಕ್ಷಾ ಪ್ರಾರ್ಥಿಸಿದರು. ಲೆಫ್ಟಿನಂಟ್ ಸಿದ್ದಣ್ಣ ನಾಯ್ಕ ನಿರೂಪಿಸಿದರು. ಕಾಲೇಜ್ ಒಕ್ಕೂಟದ ಉಪಾಧ್ಯಕ್ಷ ಎಂ.ಆರ್.ಛಾಯಾ ಅತಿಥಿಗಳನ್ನು ಪರಿಚಯಿಸಿದರು. ಕ್ರೀಡಾ ವಿಭಾಗದ ಉಪಾಧ್ಯಕ್ಷ ಪ್ರೊ.ರಾಜೇಶ ನಾಯ್ಕ ವಂದಿಸಿದರು.