ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ಸಾರಿಗೆ ಬಸ್‌ಗೆ ಜೋತು ಬಿದ್ದು ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳು.  
ಬೆಳಗಾವಿ

ಚಿಕ್ಕೋಡಿಯಲ್ಲಿ ಹೆಚ್ಚಿದೆ ಬಸ್ ಸಮಸ್ಯೆ!

ಆನಂದ ಭಮ್ಮನ್ನವರ ಚಿಕ್ಕೋಡಿ
ಬಸ್‌ಗಳ ಕೊರತೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ, ಕಾಲೇಜಿಗೆ ಹೋಗಲಾಗದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪ್ರಯಾಣಿಕರಿಗೂ ಬಸ್ ಸಮಸ್ಯೆ ಬಿಸಿತಟ್ಟಿದ್ದು, ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಚಿಕ್ಕೋಡಿ ವಿಭಾಗದಲ್ಲಿ ಚಿಕ್ಕೋಡಿ, ಅಥಣಿ, ರಾಯಬಾಗ, ನಿಪ್ಪಾಣಿ, ಹುಕ್ಕೇರಿ, ಸಂಕೇಶ್ವರ ಮತ್ತು ಗೋಕಾಕ ಘಟಕದಿಂದ ಒಟ್ಟು 668 ಬಸ್ ಓಡಾಡುತ್ತವೆ. ಇವುಗಳ ಮೂಲಕ ಪ್ರತಿದಿನ 3.90 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದಾರೆ. ಆದರೆ, ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದೊಟ್ಟಿಗೆ ಹಾಜರಾತಿ ಸಮಸ್ಯೆ ಎದುರಾಗಿದೆ.
100 ಬಸ್ ಬೇಕು: ಚಿಕ್ಕೋಡಿ ವಿಭಾಗದಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಇನ್ನೂ 100 ಬಸ್‌ಗಳು ಓಡಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು 100 ಹೊಸ ಬಸ್ ನೀಡುವಂತೆ ನಿಗಮಕ್ಕೆ ಮನವಿ ಮಾಡಿದ್ದಾರೆ. ಆದರೆ, ಸರ್ಕಾರದಿಂದ ಇನ್ನೂ ಅನುಮತಿ ದೊರೆತಿಲ್ಲ. ಪರಿಣಾಮ ಚಿಕ್ಕೋಡಿ ವಿಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಹೊಡೆತ ಬಿದ್ದಂತಾಗಿದೆ. ನಿತ್ಯ ಬಸ್ ಜೋತು ಬಿದ್ದು, ನರಕಯಾತನೆ ಅನುಭವಿಸುತ್ತಿದ್ದಾರೆ.
ಪ್ರಯಾಣಿಕರ ಹೆಚ್ಚಳ: ರಾಜ್ಯ ಸರ್ಕಾರ ‘ಶಕ್ತಿ ಯೋಜನೆ’ ಮೂಲಕ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಸಾಕಷ್ಟು ಪ್ರಶಂಸೆ ಪಡೆದಿದೆ. ಈ ಯೋಜನೆ ಪ್ರಭಾವದಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಆದರೆ, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‌ಗಳು ಇಲ್ಲದೆ ಯೋಜನೆ ದುಷ್ಪರಿಣಾಮ ನೇರವಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಬಿದ್ದಿದೆ.
"

ಚಿಕ್ಕೋಡಿ ವಿಭಾಗದಲ್ಲಿ ಪ್ರಯಾಣಿಕರ ಸಂಖ್ಯೆ ಮೊದಲಿಗಿಂತಲೂ ಹೆಚ್ಚಾಗಿದೆ. ಇರುವ ಬಸ್‌ಗಳ ಓಡಾಟ ಹೆಚ್ಚಿಸಲಾಗಿದೆ. 100 ಬಸ್‌ಗಳ ಬೇಡಿಕೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು.

"

ಚಿಕ್ಕೋಡಿ ವಿಭಾಗದಲ್ಲಿ ಪ್ರಯಾಣಿಕರ ಸಂಖ್ಯೆ ಮೊದಲಿಗಿಂತಲೂ ಹೆಚ್ಚಾಗಿದೆ. ಇರುವ ಬಸ್‌ಗಳ ಓಡಾಟ ಹೆಚ್ಚಿಸಲಾಗಿದೆ. 100 ಬಸ್‌ಗಳ ಬೇಡಿಕೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿಗಾ ವಹಿಸಲಾಗುವುದು.