ನಿಪ್ಪಾಣಿಯ ವಿದ್ಯಾ ಸಂವರ್ಧಕ ಮಂಡಳ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಜಾನನ ಚವ್ಹಾಣ, ಚಂದ್ರಕಾಂತ ಕೋಠಿವಾಲೆ, ಪಪ್ಪು ಪಾಟೀಲ, ಸಮೀರ್ ಬಾಗೇವಾಡಿ ಇತರರಿದ್ದರು.
ನಿಪ್ಪಾಣಿ: ವಿದ್ಯಾರ್ಥಿಗಳು ಪ್ರಾಮಾಣಿಕತೆ, ನಿಷ್ಠೆ, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುವುದರಿಂದ ಯಶಸ್ಸು ಲಭಿಸುತ್ತದೆ ಎಂದು ನಿವೃತ್ತ ಸುಭೇದಾರ ಮೇಜರ್ ಗಜಾನನ ಚವ್ಹಾಣ ಹೇಳಿದರು.
ಪಟ್ಟಣದ ವಿದ್ಯಾ ಸಂವರ್ಧಕ ಮಂಡಳದ ಅಂಗಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಚಂದ್ರಕಾಂತ ಕೋಠಿವಾಲೆ ನೇತೃತ್ವದ ಆಡಳಿತ ಮಂಡಳಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿದೆ ಎಂದರು.
ಸಂಸ್ಥೆಯ ನಿರ್ದೇಶಕ ವಕೀಲ ಸಂಜಯ ಶಿಂತ್ರೆ ಮಾತನಾಡಿದರು.
ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾದಳ, ಕಬ್, ಬುಲ್‌ಬುಲ್ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಮಂಡಳದ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಉಪ ಕಾರ್ಯಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ್ ಬಾಗೇವಾಡಿ, ನಿರ್ದೇಶಕ ಹರಿಶ್ಚಂದ್ರ ಶಾಂಡಗೆ, ಸಂಜಯ ಮೊಳವಾಡೆ, ಸಚಿನ ಹಾಲಪ್ಪನವರ, ಗಣೇಶ ಖಡೇದ, ಸಿಇಒ ಡಾ.ಸಿದ್ಧಗೌಡ ಪಾಟೀಲ ಇತರರಿದ್ದರು.