ಚಿಕ್ಕೋಡಿ ಸಿಎಲ್‌ಇ ಸಂಸ್ಥೆ ಪದವಿ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರಕ್ಕೆ ಗಣ್ಯರು ಚಾಲನೆ ನೀಡಿದರು. ಎಸ್.ಎಸ್.ಮೆಟಗುಡ್ಡ ಧರೆಪ್ಪ ಬಾಗೆನ್ನವರ, ವಿಠ್ಠಲ ಖಾನುಗೋಳ, ಎಂ.ಎ.ಸನದಿ ಇತರರಿದ್ದರು.
ಚಿಕ್ಕೋಡಿ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಮೈಗೂಡಿಸಿಕೊಂಡು ನಿರಂತರ ಅಧ್ಯಯನದಲ್ಲಿ ತೊಡಗಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಸಿಎಲ್‌ಇ ಸಂಸ್ಥೆ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎಸ್.ಮೆಟಗುಡ್ಡ ಹೇಳಿದರು.
ಪಟ್ಟಣದ ಸಿಎಲ್‌ಇ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಮತ್ತು ಎನ್‌ಎಸ್‌ಎಸ್ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆ ಕುರಿತು ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಧರೆಪ್ಪ ಬಾಗೆನ್ನವರ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಸವಾಲು ಎದುರಿಸುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಲಾವಿಭಾಗದ ಮುಖ್ಯಸ್ಥ ವಿಠ್ಠಲ ಖಾನುಗೋಳ, ಎನ್‌ಎಸ್‌ಎಸ್ ಘಟಕದ ಮುಖ್ಯಸ್ಥ ಎಂ.ಎ.ಸನದಿ, ಆರ್.ಕೆ.ಮಾಯಣ್ಣವರ, ಮಲ್ಲಿಕಾರ್ಜುನ ಹಳ್ಳೂರೆ ಇತರರಿದ್ದರು.