ಅಥಣಿ ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಸಕ್ಕರೆ ಮೂಟೆಗಳಿಗೆ ಪೂಜೆ ಸಲ್ಲಿಸಲಾಯಿತು. ಶಾಸಕ ಲಕ್ಷ್ಮಣ ಸವದಿ, ಪರಪ್ಪ ಸವದಿ, ಶಂಕರ ವಾಘಮೋಡೆ, ಜಿ.ಎಂ.ಪಾಟೀಲ ಇತರರಿದ್ದರು.
ಅಥಣಿ: ಅಥಣಿ: ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆ ಮೊದಲ ಹಂತದ ಕಬ್ಬು ನುರಿಸುವ ಹಂಗಾಮಿನಲ್ಲಿ 1.11 ಲಕ್ಷ ಕ್ವಿಂಟಾಲ್ ಸಕ್ಕರೆ ಉತ್ಪಾದಿಸುವ ಮೂಲಕ ಪ್ರಗತಿ ಪಥದಲ್ಲಿ ಸಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪಟ್ಟಣದ ಕೃಷ್ಣಾ ಸಹಕಾರ ಸಕ್ಕರೆ ಕಾರ್ಖಾನೆಯ ಸಕ್ಕರೆ ಗೋದಾಮಿನಲ್ಲಿ ಸಕ್ಕರೆ ಮೂಟೆಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ, ಅತಿ ಕಡಿಮೆ ಅವಧಿಯಲ್ಲಿ 1.14 ಲಕ್ಷ ಟನ್ ಕಬ್ಬು ನುರಿಸುವ ಕಾರ್ಯ ಪೂರೈಸಿದೆ. ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮಂಡಳಿ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಮಾತನಾಡಿ, ಎಲ್ಲರ ಸಹಕಾರದಿಂದ ಹಂಗಾಮು ಉತ್ತಮವಾಗಿ ಆರಂಭವಾಗಿದೆ. ಹೆಚ್ಚು ಇಳುವರಿ ಹೊಂದಿರುವ ಕಬ್ಬನ್ನು ಕಳುಹಿಸಿದಲ್ಲಿ ಗುಣಮಟ್ಟದ ಸಕ್ಕರೆ ಉತ್ಪಾದನೆಗೆ ಸಹಾಯಕವಾಗುತ್ತದೆ ಎಂದರು. ಕಾರ್ಖಾನೆ ಉಪಾಧ್ಯಕ್ಷ ಶಂಕರ ವಾಘಮೋಡೆ, ವ್ಯವಸ್ಥಾಪಕ ನಿರ್ದೇಶಕ ಜಿ.ಎಂ.ಪಾಟೀಲ ಇತರರಿದ್ದರು.