ಬೆಳಗಾವಿ ನಗರದ ಜಿಲ್ಲಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವೆಂಕಟೇಶ ಪ್ರಸಾದ ಮಾತನಾಡಿದರು. ಸುಜಿತ್ ಸೋಮಸುಂದರ್, ಸಂತೋಷ ಮೆನನ್, ಅವಿನಾಶ ಪೋತದಾರ ಇತರರಿದ್ದರು.
ಬೆಳಗಾವಿ: ಮುಂಬರುವ ದಿನಗಳಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಏಕದಿನ, ಟೆಸ್ಟ್ ಸರಣಿ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಅಧ್ಯಕ್ಷ ವೆಂಕಟೇಶ ಪ್ರಸಾದ ತಿಳಿಸಿದರು.
ನಗರದ ಕಣಬರ್ಗಿ ರಸ್ತೆಯಲ್ಲಿರುವ ಕ್ರಿಕೆಟ್ ಸ್ಟೇಡಿಯಂ ವೀಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 50 ವರ್ಷದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಅಹಿಕರ ಟನೆ ನಡೆದಿರಲಿಲ್ಲ. ಆದರೆ, ಆರ್ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ದುರ್ಟನೆ ಎಲ್ಲರ ಮನಸ್ಸು ಘಾಸಿ ಮಾಡಿದೆ. ಇಂತಹ ಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿದೆ ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಸಂಭವಿಸಿದ ಬಳಿಕ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪಂದ್ಯಗಳು ಕೈತಪ್ಪಿವೆ. ಟಿ&20 ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಪರಿಗಣಿಸಲಾಗಿಲ್ಲ. ಹೀಗಾಗಿ ಸುರಕ್ಷತೆಗೆ ವರದಿ ಸಲ್ಲಿಸಲಾಗುವುದು. ಅಲ್ಲದೆ, ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸಂಪರ್ಕಿಸಲಾಗುವುದು ಎಂದರು.
ಬೆಳಗಾವಿ, ಹುಬ್ಬಳ್ಳಿ&ಧಾರವಾಡ, ತುಮಕೂರು, ಮೈಸೂರು, ಶಿವಮೊಗ್ಗ ಹೀಗೆ ವಿವಿಧ ಜಿಲ್ಲೆಗಳಲ್ಲಿ ಕ್ರಿಕೆಟ್ ಸ್ಟೇಡಿಯಂಗಳನ್ನು ಸಮಗ್ರ ಅಭಿವೃದ್ಧಿಪಡಿಸಿ ರಣಜಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗುವುದು. ವರ್ಷದಲ್ಲಿ 2ರಿಂದ 4 ಬಾರಿ ಕ್ರಿಕೆಟ್ ಪಂದ್ಯ ಆಯೋಜಿಸುವ ಮೂಲಕ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಜಿಲ್ಲಾಮಟ್ಟದಲ್ಲೇ ಕ್ರಿಕೆಟ್ ಅಕಾಡೆಮಿ ಸ್ಥಾಪಿಸಿ ಗ್ರಾಮೀಣ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದರು.
ಕೆಎಸ್ಸಿಎ ಮಾಜಿ ಅಧ್ಯಕ್ಷ ಅನಿಲ್ ಕುಂಬಳೆ 2010ರಿಂದ 2013ರವರೆಗಿನ ಅವಧಿಯಲ್ಲಿ ಜಿಲ್ಲಾ ಸ್ಟೇಡಿಯಂಗಳಿಗೆ ಕಟ್ಟಡ, ಜಿಮ್, ಈಜುಕೊಳ ಸೇರಿ ಎಲ್ಲ ಸಕಲ ಸೌಲಭ್ಯ ಕಲ್ಪಿಸಿ ರಣಜಿ ಪಂದ್ಯಗಳನ್ನು ಆಯೋಜಿಸಲಾಗಿತ್ತು. ನಂತರ ಅಧಿಕಾರಕ್ಕೆ ಬಂದವರು ಯಾವುದೇ ಪಂದ್ಯ ಆಯೋಜಿಸಲಿಲ್ಲ. ಜತೆಗೆ ಸ್ಟೇಡಿಯಂಗಳ ನಿರ್ವಹಣೆ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಕ್ರಿಕೆಟ್ ಸಂಸ್ಥೆ ಮಾಜಿ ಜಿಲ್ಲಾಧ್ಯಕ್ಷ ಅವಿನಾಶ ಪೋತದಾರ ಮಾತನಾಡಿ, ಈ ಬಾರಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಪ್ರಸಾದ ಅವರ ಆಡಳಿತಾವಧಿಯಲ್ಲಿ ಜಿಲ್ಲಾ ಸ್ಟೇಡಿಯಂಗಳಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಸೌಕರ್ಯ ಕಲ್ಪಿಸುವ ಮೂಲಕ ಸ್ಟೇಡಿಯಂಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಉಪಾಧ್ಯಕ್ಷ ಸುಜಿತ್ ಸೋಮಸುಂದರ್, ಪ್ರಧಾನ ಕಾರ್ಯದರ್ಶಿ ಸಂತೋಷ ಮೆನನ್, ಖಜಾಂಚಿ ವಿನಯ ಮೃತ್ಯುಂಜಯಮಠ ಇತರರಿದ್ದರು.