ಬೆಳಗಾವಿ : ಕೇಂದ್ರ ಸರ್ಕಾರದ ತೈಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಬಿಜೆಪಿಯವರು ಜಾಗತಿಕ ಬಿಕ್ಕಟ್ಟಿನ ನೆಪ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಸಮರ್ಥಿಸಿಕೊಳ್ಳುತ್ತಿರುವುದು ಸಂಪೂರ್ಣ ತಪ್ಪು. ಇದು ಜನವಿರೋಧಿ ನೀತಿ ಎಂದು ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾಸ್, ಪೆಟ್ರೋಲ್, ಚುನಾವಣೆಗಳು ಮುಗಿದ ತಕ್ಷಣವೇ ಕೇಂದ್ರ ಸರ್ಕಾರವು ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದು ಹೊಸದೇನಲ್ಲ, ಇದು ಅವರ ಹಳೆಯ ಚಾಳಿಯಾಗಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದು, ಜನರ ಬದುಕು ದುಸ್ತರವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಹಿಂದೆ ಯುಪಿಎ ಆಡಳಿತಾವಧಿಯಲ್ಲಿ ಪೆಟ್ರೋಲ್ ದರ ಕೇವಲ 1 ರೂಪಾಯಿ ಹೆಚ್ಚಾದರೂ ದೇಶಾದ್ಯಂತ ಬೀದಿಗಿಳಿದು ದೊಡ್ಡ ಹಂಗಾಮಾ ಮಾಡುತ್ತಿದ್ದ ಬಿಜೆಇ ನಾಯಕರು, ತಮ್ಮದೇ ಸರ್ಕಾರ ನಿರಂತರವಾಗಿ ಬೆಲೆ ಏರಿಸುತ್ತಿದ್ದರೂ ಮೌನ ವಹಿಸಿರುವುದರ ಹಿಂದೆ ರಾಜಕೀಯ ಸ್ವಾರ್ಥ ಅಡಗಿದೆ. ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಜನಸಾಮಾನ್ಯರ ಆರ್ಥಿಕ ಸಂಕಷ್ಟಗಳಿಗೆ ಸಂಪೂರ್ಣ ಕುರುಡಾಗಿದ್ದಾರೆ ಎಂದು ದೂರಿದಿದರು.