ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ ಜಾರಕಿಹೊಳಿ ಉದ್ಘಾಟಿಸಿದರು. ಸರ್ವೋತ್ತಮ ಜಾರಕಿಹೊಳಿ, ಬಸಗೌಡ ಪಾಟೀಲ, ಶಿವಪ್ಪ ಮರ್ದಿ ಇತರರಿದ್ದರು. 
ಬೆಳಗಾವಿ

ರೈತರ ಪ್ರಗತಿಗೆ ಸಂಘ ಸಹಕಾರಿ

ಗೋಕಾಕ:

ರೈತರಿಗೆ ಸೌಲಭ್ಯ ತಲುಪಿಸುವ ಮೂಲಕ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವ ಸಹಕಾರ ಸಂಘಗಳ ಪಾತ್ರ ಪ್ರಮುಖವಾಗಿದೆ ಎಂದು ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ ಜಾರಕಿಹೊಳಿ ಹೇಳಿದರು.

ಗೋಕಾಕ ಸಪ್ಲೈಯರ್ಸ್ ಸಭಾಭವನದಲ್ಲಿ ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಆಶ್ರಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರ ಬೆಳವಣಿಗೆಗೆ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಆಡಳಿತ ಮಂಡಳಿ ಹಾಗೂ ಸಿಬ್ಬಂದಿ, ಜನರ ಆಶೋತ್ತರಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು. ಡಿಸಿಸಿ ಬ್ಯಾಂಕ್ ರೈತರ ಆರ್ಥಿಕ ಪ್ರಗತಿಗೆ ಹಲವಾರು ಯೋಜನೆ ಅನುಷ್ಠಾನಗೊಳಿಸಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜಯಪುರದ ಡಿಸಿಸಿ ಬ್ಯಾಂಕ್ ನಿವೃತ್ತ ಉಪಪ್ರಧಾನ ವ್ಯವಸ್ಥಾಪಕ ಆರ್.ಎಂ.ಬಣಗಾರ ಹಾಗೂ ಗೋಕಾಕ ಅರ್ಬನ್ ಬ್ಯಾಂಕ್ ವ್ಯವಸ್ಥಾಪಕ ಎಸ್.ಎಸ್.ಪಾಟೀಲ ಮಾತನಾಡಿ, ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಲ್ಲಿ ವ್ಯಾಪಾರ ಅಭಿವೃದ್ಧಿ ಯೋಜನೆ ಅಳವಡಿಸಿಕೊಳ್ಳಬೇಕು. ್ಯಾಕ್ಸ್ ಸಂಘಗಳ ಬೆಳವಣಿಗೆಗೆ ಪೂರಕವಾದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹೊಸ ಉದ್ದೇಶ ಹಾಗೂ ಸಹಕಾರ ಸಂಘಗಳ ಸಮಗ್ರ ಬೆಳವಣಿಗೆಗೆ ಪೂರಕವಾದ ಅಂಶಗಳ ಕುರಿತು ತರಬೇತಿ ನೀಡಿದರು.
ಯುವನಾಯಕ ಸರ್ವೋತ್ತಮ ಜಾರಕಿಹೊಳಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ನಿರ್ದೇಶಕ ಶಿವಪ್ಪ ಮರ್ದಿ, ರಾಜ್ಯ ಸಹಕಾರ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳ ನಿರ್ದೇಶಕ ಬಸನಗೌಡ ಪಾಟೀಲ, ಬಸಪ್ಪ ಸಂತಿ, ನಿಂಗಪ್ಪ ಚಿಂಚಲಿ, ಗುರುನಾಥ ಹೂಗಾರ, ವರ್ಧಮಾನ ಬೊಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಜಗ್ಗಿನವರ, ಸಹಕಾರ ಸಂಘಗಳ ಉಪನಿಬಂಧಕ ರವೀಂದ್ರ ಪಾಟೀಲ, ಸಹಾಯಕ ನಿಬಂಧಕಿ ಶಾಹೀನ್ ಅತ್ತಾರ, ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ತಾಲೂಕು ನಿಯಂತ್ರಣಾಧಿಕಾರಿ ಬಿ.ಆರ್.ರೆಬ್ಬನ್ನವರ, ಶೃಂಗ ಮಹಾಮಂಡಳ ನಿರ್ದೇಶಕ ಅಶೋಕ ಖಂಡ್ರಟ್ಟಿ ಇದ್ದರು.