ಬೆಳಗಾವಿಯ ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಕಣಬರಗಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಡಾ.ಶಶಿಕಾಂತ ಕೊಣ್ಣೂರ, ಸಂತೋಷ ಖೋತ, ಆದಿತ್ಯಾ ಪಾಟೀಲ, ಶಿವು ಕಮ್ಮಾರ ಇತರರಿದ್ದರು.
ಗ್ರಾಮಗಳು ವಿಕಾಸವಾದರೆ ಭಾರತ ವಿಕಾಸವಾಗುತ್ತದೆ. ಗ್ರಾಮಗಳ ಅಭಿವೃದ್ಧಿ ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು. ಅದನ್ನು ಇಂದಿಗೂ ಸಂಪೂರ್ಣವಾಗಿ ಸಾಧಿಸುವಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಗ್ರಾಮಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಯುವಜನರೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಶಶಿಕಾಂತ ಕೊಣ್ಣೂರು ಹೇಳಿದರು.
ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಮಹಾನಗರ ಪಾಲಿಕೆ ಹಾಗೂ ಯೂಥ್ ಫಾರ್ ಸೇವಾ ಸಹಯೋಗದಲ್ಲಿ ಬೆಳಗಾವಿ ಸಮೀಪದ ಕಣಬುರಗಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸ್ವಚ್ಛತಾ ಅಭಿಯಾನ, ಹರ್ ಘರ್ ತಿರಂಗಾ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಮನೆಮನೆಗೆ ತಿರಂಗಾ ಅಭಿಯಾನದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.
ಸಂತೋಷ ಖೋತ, ಆದಿತ್ಯಾ ಪಾಟೀಲ, ಶಿವು ಕಮ್ಮಾರ, ವಿಜಯಲಕ್ಷ್ಮೀ ಪಾಟೀಲ, ಕಾರ್ತಿಕ ಪಾಟೀಲ, ಪಾಲಿಕೆ ಸಿಬ್ಬಂದಿ, ಎನ್‌ಎಸ್‌ಎಸ್ ಸ್ವಯಂಸೇವಕರು ಇದ್ದರು.