ಗೋಕಾಕ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರ ಮಾತನಾಡಿದರು. ನಿಜಗುಣ ಸ್ವಾಮೀಜಿ, ಪ್ರಮೋದಾನಂದ ಸ್ವಾಮೀಜಿ, ವಿಜಯಸಿದ್ಧೇಶ್ವರ ಸ್ವಾಮೀಜಿ, ಶಿವಾನಂದ ಸ್ವಾಮೀಜಿ ಇತರರಿದ್ದರು. 
ಬೆಳಗಾವಿ

ಕನ್ಹೇರಿ ಸ್ವಾಮೀಜಿ ವಿರುದ್ಧದ ಆದೇಶ ಹಿಂಪಡೆಯಲಿ

ಗೋಕಾಕ: ಕನ್ಹೇರಿಯ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಮೇಲೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ವತ್ತದಲ್ಲಿ ಶನಿವಾರ ಬಸವಾದಿ ಶರಣರ ಹಿಂದು ವೇದಿಕೆ ಹಾಗೂ ಹಿಂದುಪರ ಸಂಘಟನೆಗಳು ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆ ಸಂಚಾರ ತಡೆ ನಡೆಸಿ ಮೆರವಣಿಗೆ ಮೂಲಕ ಮಿನಿ ವಿಧಾನ ಸೌಧಕ್ಕೆ ತೆರಳಿ ತಹಸೀಲ್ದಾರ್ ಡಾ.ಮೋಹನ ಭಸ್ಮೆ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಸ್ವಾಮೀಜಿ ಧ್ವನಿ ಅಡಗಿಸುವ ಪ್ರಯತ್ನ ಸಮಾಜದ ಹಿತಾಸಕ್ತಿಗೆ ವಿರುದ್ಧವಾಗಿದೆ. ಸರ್ಕಾರ ತಕ್ಷಣ ನಿರ್ಬಂಧ ಆದೇಶ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದ್ದಾರೆ.