ಮಕ್ಕಳಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ’ ಪತ್ರಿಕೆ ಉಚಿತವಾಗಿ ಕೊಡುಗೆ ನೀಡಿದ ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಅವರನ್ನು ಸನ್ಮಾನಿಸಲಾಯಿತು. ನಾಗೇಶ್ವರ ಸ್ವಾಮೀಜಿ, ಬಸವರಾಜ ದಂಡಿನ, ಎಸ್.ಜಿ.ವಲ್ಯಾಪುರಿ ಇತರರಿದ್ದರು.
- ‘ವಿದ್ಯಾರ್ಥಿ ಉದ್ಯೋಗ ಮಿತ್ರ’ ಪತ್ರಿಕೆ ಕೊಡುಗೆ
- ನಾಗೇಶ್ವರ ಸ್ವಾಮೀಜಿ ಸಲಹೆ
ಮಮದಾಪುರ: ವಿದ್ಯಾರ್ಥಿ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಸಮಯ ಪಾಲನೆಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಉಪ್ಪಾರಹಟ್ಟಿ ಸಿದ್ಧಾರೂಢ ಮಠದ ನಾಗೇಶ್ವರ ಸ್ವಾಮೀಜಿ ಹೇಳಿದರು.
ಗೋಕಾಕ ತಾಲೂಕಿನ ಮಕ್ಕಳಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವಸಿದ್ಧತೆ ಸಂವಾದ ಕಾರ್ಯಕ್ರಮ ಹಾಗೂ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ‘ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ’ ಪತ್ರಿಕೆ ಉಚಿತ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಅಧ್ಯಯನದ ಜತೆಗೆ ಪರೀಕ್ಷೆಯಲ್ಲಿ ಹೆಚ್ಚಿನ ಅನುಕೂಲವಾಗುವ ದೃಷ್ಟಿಯಿಂದ ವಿಜಯವಾಣಿ ‘ವಿದ್ಯಾರ್ಥಿ ಉದ್ಯೋಗ ಮಿತ್ರ’ ಪುರವಣಿಯನ್ನು ಸತತ ಮೂರು ವರ್ಷದಿಂದ ಉಚಿತವಾಗಿ ಕೊಡುಗೆ ನೀಡುತ್ತಿರುವ ಟಿ.ಆರ್.ಕಾಗಲ್ ಅವರ ಕಾರ್ಯವೈಖರಿ ಶ್ಲಾಘನೀಯ ಎಂದರು.
ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲೆಂದು ಶಿಕ್ಷಕರು ಹಾಗೂ ಎಸ್‌ಡಿಎಂಸಿ ಆಡಳಿತ ಮಂಡಳಿ ಸಮರ್ಪಕ ಸಿದ್ಧತೆ ಕೈಗೊಂಡಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಭಯಮುಕ್ತರಾಗಿ ಧೈರ್ಯದಿಂದ ಪರೀಕ್ಷೆ ಎದುರಿಸಿ ಉತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ ತರಬೇಕು ಎಂದರು. ಮುಖ್ಯಶಿಕ್ಷಕ ಎಸ್.ಜಿ.ವಲ್ಯಾಪುರಿ ಮಾತನಾಡಿದರು.
ಕಳೆದ ಸಾಲಿನಲ್ಲಿ 10ನೇ ತರಗತಿಯ ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತತೀಯ ಸ್ಥಾನ ಪಡೆದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ದಂಡಿನ, ಉಪಾಧ್ಯಕ್ಷ ಮಾರುತಿ ಭುಮ್ಮನ್ನವರ, ಮಹಾಂತೇಶ ಗಸ್ತಿ, ಇಕ್ಬಾಲ್ ಶಿವಾಪುರ, ಸಿದ್ದರಾಯ ಮುತ್ತೆನ್ನವರ, ರಮೇಶ ಬಚ್ಚನವರ, ಯಲ್ಲಪ್ಪ ಹರಿಜನ, ಕೆಂಪಣ್ಣ ಮಾಳದ, ಗಣಪತಿ ದುರದುಂಡಿ, ರವೀಂದ್ರ ನಂದಗಾಂವ, ಕೀರಪ್ಪ ಕಾರ್ವಿ ಇತರರಿದ್ದರು.