ಬೆಳಗಾವಿ: ಜಿಲ್ಲೆಯ ಎರಡು ಪ್ರತ್ಯೇಕ ಪ್ರಕರಣದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾೃಕ್ಟರ್‌ಗೆ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿವೆ.
ಜಿಲ್ಲೆಯ ಕಟಕೋಳ-ಮುನವಳ್ಳಿ ರಸ್ತೆಯ ಪದಮಂಡಿ ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಸವಾರ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದ ಶಿವು ಜಕ್ಕಪ್ಪನ್ನವರ (22) ಮೃತಪಟ್ಟಿದ್ದಾರೆ. ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಹಾರೂಗೇರಿ-ರಾಯಬಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರಾೃಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಸವಾರ ಬಾಗಲಕೋಟೆ ಜಿಲ್ಲೆ ಬನಹಟ್ಟಿಯ ಆನಂದ ಪೂಜಾರಿ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.