ಇಬ್ಬರು ಸಾವು 
ಬೆಳಗಾವಿ

ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

ಧರ್ಮರಾಜ ರಾಮನಗೌಡ ಪಾಟೀಲ
ಬೆಳಗಾವಿ: ಅಥಣಿ ತಾಲೂಕಿನ ಮಂಗಸೂಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾಂಗಲಿ ಜಿಲ್ಲೆಯ ಅಷ್ಟಾ ಗ್ರಾಮದ ದತ್ತಾತ್ರೇಯ ಖಾಂಡೇಕರ(39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಸ್ಕೂಟರ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಾಯಗೊಂಡಿದ್ದ ಸವಾರ ಚಿಕ್ಕೋಡಿ ತಾಲೂಕಿನ ಕಾಡಾಪುರದ ಈಶ್ವರ ಉಸ್ಕೆ (65) ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದಾರೆ.
ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.