death 
ಬೆಳಗಾವಿ

ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಪ್ರತ್ಯೇಕ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರರಿಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದ್ದಾರೆ.
ಬೈಲಹೊಂಗಲ ತಾಲೂಕಿನ ನೇಗಿನಹಾಳ-ಎಂ.ಕೆ.ಹುಬ್ಬಳ್ಳಿ ರಸ್ತೆಯಲ್ಲಿನ ಅಪಘಾತದಲ್ಲಿ ಗಾಯಗೊಂಡಿದ್ದ ನೇಗಿನಹಾಳ ಗ್ರಾಮದ ಅರ್ಜುನ ಮಡಿವಾಳರ (49), ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿನ ಅಪಘಾತದಲ್ಲಿ ವಿಜಯಪುರದ ಅಭಯ ಮುಚ್ಚಂಡಿ (21) ಅಸುನೀಗಿದ್ದಾರೆ.