ಬೆಳಗಾವಿ ನಗರದ ಸುವರ್ಣ ವಿಧಾನಸೌಧದ ಕೇಂದ್ರ ಸಭಾಂಗಣದಲ್ಲಿ ಮಂಗಳವಾರ ಮತದಾರರ ಪಟ್ಟಿ ಪರಿಷ್ಕರಣೆ ತರಬೇತಿ ಕಾರ್ಯಾಗಾರ ನಡೆಯಿತು. ವಿ.ರಾವೇಂದ್ರ, ಮೊಹಮ್ಮದ್​ ರೋಷನ್​, ವಿಜಯಕುಮಾರ ಹೊನಕೇರಿ, ಕಾರ್ತಿಕ್​ ಎಂ. ಇತರರಿದ್ದರು. 
ಬೆಳಗಾವಿ

ವಲಸೆ ಮತದಾರರ ಪರಿಶೀಲನೆ ಕಡ್ಡಾಯ

ಬೆಳಗಾವಿ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಅನುಸಾರ ಪಾರದರ್ಶಕ ಹಾಗೂ ದೋಷರಹಿತ ರೀತಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯಬೇಕು ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾವೇಂದ್ರ ಹೇಳಿದರು.
ನಗರದ ಸುವರ್ಣ ವಿಧಾನಸೌಧದ ಕೇಂದ್ರ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್​ಐಆರ್​) ಕುರಿತ ವಿಭಾಗ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಈ ಪ್ರಕ್ರಿಯೆ ಯಶಸ್ವಿಯಾಗಿ ಜಾರಿಗೆ ತರಲು ಎಲ್ಲ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಅರ್ಹ ಮತದಾರರ ಸೇರ್ಪಡೆ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು. ಗೈರುಹಾಜರಾಗಿರುವ ಮತ್ತು ವಲಸೆ ಮತದಾರರ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ ರೋಷನ್​ ಮಾತನಾಡಿ, ಚುನಾವಣಾ ಆಯೋಗ ಹೊರಡಿಸಿರುವ ನಿಯಮಗಳು ಮತ್ತು ಮಾರ್ಗಸೂಚಿಗಳ ಅನುಸಾರವೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಕಟ್ಟುನಿಟ್ಟಾಗಿ ನಡೆಸಬೇಕು. ಬೆಳಗಾವಿ ಉತ್ತರ ಮತ್ತು ದಣ ವಿಧಾನಸಭಾ ೇತ್ರಗಳಲ್ಲಿ ಬಹು ನೋಂದಣಿಗಳ ಮ್ಯಾಪಿಂಗ್​ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಆದರೆ, ಇನ್ನೂ ಅನೇಕ ನಾಗರಿಕರು ಮ್ಯಾಪಿಂಗ್​ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ. ಉಳಿದಿರುವ ಮ್ಯಾಪಿಂಗ್​ ಕಾರ್ಯವನ್ನು ತಣ ಪೂರ್ಣಗೊಳಿಸಿ, ೇತ್ರ ಸಮೀೆಗಳ ಮೂಲಕ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಸೇರ್ಪಡೆಗೊಳಿಸುವಂತೆ ನಿರ್ದೇಶನ ನೀಡಿದರು.
ಕಾರ್ಯಾಗಾರದಲ್ಲಿ ಹೊಸ ಮತದಾರರ ನೋಂದಣಿ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಮತ್ತು ನಕಲಿ ಮತದಾರರ ಹೆಸರು ತೆಗೆದುಹಾಕುವುದು ಹಾಗೂ ಆನ್​ಲೈನ್​ ಸೇವೆಗಳ ಬಳಕೆ ಸೇರಿದಂತೆ ಮತದಾರರ ಪಟ್ಟಿಯ ಪರಿಷ್ಕರಣೆ ಅಂಶಗಳ ಕುರಿತು ಅಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಲಾಯಿತು.ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪಾಲಿಕೆ ಆಯುಕ್ತ ಕಾರ್ತಿಕ್​ ಎಂ. ಇತರರಿದ್ದರು.