ಬಸಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ವಿತರಿಸಲಾಯಿತು. ಎಂ.ಎಚ್.ಮೋಮಿನ್, ಬಿ.ಕೆ.ಕಿಚಡಿ, ಎಸ್.ಎ್.ಆಲದಕಟ್ಟಿ ಇತರರಿದ್ದರು.
ದಡ್ಡಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ಸಹಕಾರಿಯಾಗಿದೆ ಎಂದು ಬಸಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಎಂ.ಎಚ್.ಮೋಮಿನ್ ಅಭಿಪ್ರಾಯಪಟ್ಟರು.
ಹುಕ್ಕೇರಿ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬುಧವಾರ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿ-ಉದ್ಯೋಗ ಮಿತ್ರ ಪತ್ರಿಕೆ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯ. ಕ್ರೀಡೆ, ವಿಜ್ಞಾನ ಸೇರಿದಂತೆ ಅಪಾರ ಜ್ಞಾನ ಭಂಡಾರವಾಗಿರುವ ಪತ್ರಿಕೆಯನ್ನು ಪ್ರತಿನಿತ್ಯ ಓದುವ ಮೂಲಕ ವಿದ್ಯಾರ್ಥಿಗಳು ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಶಿಕ್ಷಕರಾದ ಬಿ.ಕೆ.ಕಿಚಡಿ, ಎಸ್.ಎ್.ಆಲದಕಟ್ಟಿ, ಮಹಾಂತೇಶ ಹಲಕರ್ಣಿ, ಸಹಶಿಕ್ಷಕರು ವಿದ್ಯಾರ್ಥಿಗಳು ಇದ್ದರು.
ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿ ಇಟ್ಟುಕೊಂಡು ನಿಖರ ಮತ್ತು ವಿಶ್ವಾಸಾರ್ಹ ಸುದ್ದಿಗಳಿಗೆ ಹೆಸರಾದ ವಿಜಯವಾಣಿ ವಿದ್ಯಾರ್ಥಿ-ಉದ್ಯೋಗ ಮಿತ್ರ ಸಂಚಿಕೆ ನೀಡಲಾಗುತ್ತಿದೆ. ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆ ಓದುವುದರಿಂದ ಪರೀಕ್ಷೆಗೆ ಸಹಕಾರಿಯಾಗಲಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು.
— ರಾಜು ಬೆಡಸೂರಿ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಬಸಾಪುರ