ಬೆಳಗಾವಿ: ನಗರದ ಅನಗೋಳ ನಾಕಾದ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪೌರಕಾರ್ಮಿಕ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದ ಅವ್ವಕ್ಕ ಕೋಲಕಾರ (46) ಮೃತಪಟ್ಟಿದ್ದಾಳೆ.
ಮಹಾನಗರ ಪಾಲಿಕೆಯಲ್ಲಿ 15 ವರ್ಷದಿಂದ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಒಂದೂವರೆ ವರ್ಷದಿಂದಷ್ಟೇ ಕಾಯಂ ಪೌರಕಾರ್ಮಿಕರಾಗಿ ನೇಮಕಗೊಂಡಿದ್ದರು. ಶನಿವಾರ ರಸ್ತೆ ಬದಿಯಲ್ಲಿ ಸ್ವಚ್ಛತಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ವಾಹನ ಡಿಕ್ಕಿ ಹೊಡೆದಿರುವ ಪರಿಣಾಮ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ದಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.