ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಬಿಜೆಪಿ, ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆಯಿತು. 
ಬೆಳಗಾವಿ

ಮಹಿಳಾ ಮೀಸಲಾತಿ; ಬಿಜೆಪಿ, ಕಾಂಗ್ರೆಸ್ ವಾಗ್ವಾದ

ಬೆಳಗಾವಿ:ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಕಾಯ್ದೆ ವಿಷಯ ಕುರಿತು ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ನಡುವೆ ವಾಗ್ವಾದ ನಡೆಯಿತು.
ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ( ನಾರಿ ಶಕ್ತಿ ವಂದನ್ ಅಧಿನಿಯಮ)ಗೆ ಸೋಲಾಗಿರುವುದನ್ನು ಖಂಡಿಸಿ ಆಡಳಿತಾರೂಢ ಬಿಜೆಪಿ ಸದಸ್ಯರು ಖಂಡನಾ ನಿರ್ಣಯ ಮಂಡಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗದ್ದಲಕ್ಕೆ ಎಡೆ ಮಾಡಿಕೊಟ್ಟಿತ್ತು.
ದೇಶದಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ಸ್ಥಾನಮಾನ ಕಲ್ಪಿಸಿದ್ದು, ಮಹಿಳೆಯರಿಗಾಗಿ ವಿಶೇಷ ಕಾಯ್ದೆ ಅನುಷ್ಠಾನಗೊಳಿಸಿದ್ದು ಕಾಂಗ್ರೆಸ್ ನೆಹರು, ಇಂದಿರಾ ಗಾಂಧಿ. ಆದರೆ, ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಜಾರಿಗೆ ತರುತ್ತಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರ ಆರೋಪಕ್ಕೆ ತಿರುಗೇಟು ನೀಡಿದ ಬಿಜೆಪಿ ಸದಸ್ಯರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ತಂದಿದ್ದಾರೆ. ವಿನಃ ಕಾಂಗ್ರೆಸ್ ಸರ್ಕಾರ, ಕಾಂಗ್ರೆಸ್ ನಾಯಕರು ಅಲ್ಲ. ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಿರಿ ಎಂದು ವಾಗ್ದಾಳಿ ನಡೆಸಿದರು. ಇದರಿಂದಾಗಿ ಪರಸ್ಪರ ಆರೋಪ ಪ್ರತ್ಯಾರೋಪ ಗದ್ದಲ ಉಂಟಾಗುತ್ತಿದ್ದಂತೆ ಮೇಯರ್ ಪ್ರೀತಿ ಕಾಮಕರ ಸಭೆಯಲ್ಲಿ ಮುಂದೂಡಿದರು.
ಅಧಿಕಾರಿಗಳ ವಿರುದ್ಧ ಆಕ್ರೋಶ:ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳಲ್ಲಿ ಯಾವ್ಯಾವ ಅಧಿಕಾರಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಏಜೆಂಟರ್ ಕೆಲಸಗಳಿಗೆ ಆದ್ಯತೆ ನೀಡಿದಷ್ಟು ಸದಸ್ಯರ ಕೆಲಸಗಳಿಗೆ ನೀಡುತ್ತಿಲ್ಲ. ಒಬ್ಬರು ಕೆಲಸವನ್ನು ಮತ್ತೊಬ್ಬರು ಮಾಡುತ್ತಿದ್ದಾರೆ. ಬೇಕಾಬಿಟ್ಟಿಯಾಗಿ ಇ -ಸ್ವತ್ತು ಅರ್ಜಿಗಳು ವಿಲೇವಾರಿ ಆಗುತ್ತಿವೆ. ದೊಡ್ಡ ಪ್ರಮಾಣದಲ್ಲಿ ಹಣಕಾಸಿ ವ್ಯವಹಾರ ನಡೆಯುತ್ತಿದೆ. ಇದರಿಂದ ಪಾಲಿಕೆ ಸದಸ್ಯರಿಗೆ ಕೆಪ್ಪು ಮಸಿ ಬಳಿಯುವ ಕೆಲಸ ಆಗುತ್ತಿದೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ, ಚರಂಡಿ ದುರಸ್ತಿ ಮಾಡಿ:ಮಹಾನಗರದಲ್ಲಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳ ಮುಚ್ಚುವ ಹಾಗೂ ಚರಂಡಿಗಳಲ್ಲಿ ತುಂಬಿರುವ ಹೂಳೆತ್ತು ಕೆಲಸಗಳು ಆಗುತ್ತಿಲ್ಲ. ಮಳೆಗಾಲ ಆರಂಭವಾದರೂ ಮುನ್ನೆಚ್ಚರಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದಾಗಿ ಜನಸಾಮಾನ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಕಾಮಗಾರಿ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಮೇಯರ್ ಪ್ರೀತಿ ಕಾಮಕರ, ಉಪಮೇಯರ್ ಹನಮಂತ ಕೊಂಗಾಲಿ, ಸಂತೋಷ ಪೇಡನೇಕರ್, ಶಂಕರ ಪಾಟೀಲ, ರವಿ ದೋತ್ರೆ, ರಾಜಶೇಖರ ಡೋಣಿ, ಆಯುಕ್ತ ಕಾರ್ತಿಕ್ ಎಂ., ಉಪ ಆಯುಕ್ತ ಸಿದ್ದು ಹುಲ್ಲೋಳ್ಳಿ ಇತರರಿದ್ದರು.
..........