ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ಭಕ್ತರು ಭಂಡಾರ ಎರಚಿ ಸಂಭ್ರಮಿಸಿದರು. 
ಬೆಳಗಾವಿ

ಯಲ್ಲಮ್ಮದೇವಿ ಜಾತ್ರೆ ಇಂದಿನಿಂದ

ರಾಘವೇಂದ್ರಗೌಡ ಭೀ ಪಾಟೀಲ್
ಹೊಸ ವರ್ಷದಲ್ಲಿ ಜಾತ್ರೆ ನಡೆಯುತ್ತಿರುವುದರಿಂದ ಭಕ್ತರಲ್ಲಿ ಹುಮ್ಮಸ್ಸು ಮೂಡಿದೆ. ಭಕ್ತರಿಗೆ ಅಗತ್ಯ ಸೌಕರ್ಯ ಒದಗಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಕ್ರಮವಹಿಸಿದೆ.
ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಮತ್ತು ಸವದತ್ತಿ ನೂಲಿನ ಗಿರಣಿ ಮಾರ್ಗಗಳಲ್ಲಿ ವಾಹನದಟ್ಟಣೆ ಹೆಚ್ಚಿದೆ. ಪರಡಿ ತುಂಬಿ ದೇವಿಗೆ ನೈವೇದ್ಯ ಸಮರ್ಪಿಸಲು ರಸ್ತೆಬದಿ ಒಲೆ ಹೂಡಿರುವ ಭಕ್ತರು, ತರಹೇವಾರಿ ಖಾದ್ಯಗಳನ್ನು ತಯಾರಿಸುತ್ತಿದ್ದಾರೆ. ಜಾತ್ರೆಯಲ್ಲಿ ಭದ್ರತೆಗೆ ಒತ್ತುನೀಡಿದ್ದು, ಗುಡ್ಡದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.