ವೀರಭದ್ರಪ್ಪ ಹಾಲಹರವಿ 
ಬೆಳಗಾವಿ

ಯುವ ಜೆಡಿಎಸ್ ಸಮಾವೇಶ

ಡಿ.ವಿ. ಕಮ್ಮಾರ
ಬೆಳಗಾವಿ : ಜೆಡಿಎಸ್ ವತಿಯಿಂದ ಫೆ.22ರಂದು ಬೆಳಗ್ಗೆ 11ಕ್ಕೆ ನಗರದ ಗಾಂಧಿ ಭವನದಲ್ಲಿ ಯುವ ಜನತಾದಳದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿ ಪಕ್ಷದ ಪ್ರಾಬಲ್ಯ ಕಡಿಮೆ ಇದೆ ಎಂದು ಹಲವರು ಹೇಳುತ್ತಿದ್ದಾರೆ. ಇದನ್ನೇ ಸವಾಲಾಗಿ ಸ್ವೀಕರಿಸಿ, ಪಕ್ಷ ಸಂಘಟನೆ ಮತ್ತು ಪಕ್ಷವನ್ನು ಬಲವರ್ಧನೆಗೊಳಿಸುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಯುವ ಜನತಾದಳದ ರಾಜ್ಯ ಅಧ್ಯಕ್ಷ ನಿಖಿಲ ಕುಮಾರಸ್ವಾಮಿ, ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಸೇರಿದಂತೆ ಪಕ್ಷದ ವಿವಿಧ ಮುಖಂಡರು ಪಾಲ್ಗೊಳ್ಳುವರು. ಸಮಾವೇಶದ ಪ್ರಯುಕ್ತ ಅವತ್ತು ಬೆಳಗ್ಗೆ ನಗರದ ಸಿಪಿಎಡ್ ಮೈದಾನದಿಂದ ಬೈಕ್ ರ‌್ಯಾಲಿ ಆರಂಭಿಸಿ, ಚನ್ನಮ್ಮ ವೃತ್ತದ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ, ಕಾಲೇಜು ರಸ್ತೆ ಮಾರ್ಗವಾಗಿ ಗಾಂಧಿ ಭವನಕ್ಕೆ ಕಾರ್ಯಕರ್ತರು ಮತ್ತು ಮುಖಂಡರು ಆಗಮಿಸುವರು ಎಂದು ಮಾಹಿತಿ ನೀಡಿದರು.
ಶಿವಾನಂದ ಸಂಜೀವಗೋಳ, ಸಿದ್ಧನಗೌಡ ಪಾಟೀಲ, ಪ್ರಜ್ವಲ್ ಬಡಿಗೇರ ಸುದ್ದಿಗೋಷ್ಠಿಯಲ್ಲಿದ್ದರು.