ಕಿತ್ತೂರು ರಾಣಿ ಚನ್ನಮ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ
ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮ ಉತ್ಸವ ಅಂಗವಾಗಿ ಕಿತ್ತೂರು ಚನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಲ್ಲಿನ ಸುವರ್ಣ ವಿಧಾನ ಸೌಧದ ಮುಂಭಾಗದಲ್ಲಿ ವಿಜಯ ಜ್ಯೋತಿಗೆ ಪೂಜೆ ಸಲ್ಲಿಸಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದರು.
ವೀರ ಜ್ಯೋತಿ ಯಾತ್ರೆಯು ಅ.೧೨ ರಿಂದ ೨೨ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳ ಮುಖಾಂತರ ಸಂಚರಿಸಿ ಅ. ೨೩ ರಂದು ಚನ್ನಮ್ಮನ ಕಿತ್ತೂರಿಗೆ ಆಗಮಿಸಲಿದೆ.
ರಾಜಗುರು ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ,ಶಾಸಕ ಬಾಬಾಸಾಹೇಬ ಪಾಟೀಲ, ಸಂಗೋಳ್ಳಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸಂತೋಷ ಹಾನಗಲ್, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್, ಬೈಲಹೊಂಗಲ್ ನಗರ ಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ ಇದ್ದರು.