ಜಿಪಂ,ತಾಪಂ ಚುನಾವಣೆ ಗಂಭೀರವಾಗಿ ಪರಿಗಣಿಸಿ
| ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಸೂಚನೆ | ವಿಭಾಗ ಮಟ್ಟದ ಸಭೆ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಮುಂಬರುವ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಸಂಘಟನಾತ್ಮಕ ಸಿದ್ಧತೆ, ಚುನಾವಣಾ ಕಾರ್ಯತಂತ್ರಗಳು ಹಾಗೂ ಪಕ್ಷದ ಬಲವರ್ಧನೆಗೆ ಪಕ್ಷದ ನಾಯಕರು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲೆಯ ನಾಯಕರುಗಳಿಗೆ ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಸೂಚಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಬೆಳಗಾವಿ,ಚಿಕ್ಕೋಡಿ ,ಬಾಗಲಕೋಟೆ , ವಿಜಯಪುರ ಜಿಲ್ಲೆಗಳ ಸಂಘಟನಾತ್ಮಕ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವುದು, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ, ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಹಾಗೂ ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅನುಸರಿಸಬೇಕಾದ ಕಾರ್ಯಯೋಜನೆಗಳ ಕುರಿತು ಪ್ರಮುಖ ವಿಚಾರಗಳನ್ನು ಚರ್ಚಿಸಿ ಪಕ್ಷದ ನಾಯಕರಿಗೆ ಪಕ್ಷ ಬಲಪಡಿಸು ಜವಾಬ್ದಾರಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಸಂಸದ ಜಗದೀಶ ಶೆಟ್ಟರ್,ಪಿ.ಸಿ ಗದ್ದಿಗೌಡ್ರ, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಭಾಗ ಪ್ರಭಾರಿ ಸಂಜಯ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್,ಶಾಸಕ ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ಸಿದ್ದು ಸವದಿ,ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಹನುಮಂತ ನಿರಾಣಿ,ಮುರುಗೇಶ್ ನಿರಾಣಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಎಸ್.ಕೆ.ಬೆಳ್ಳುಬ್ಬಿ, ಶ್ರೀಮಂತ ಪಾಟೀಲ, ವಿಪ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಸಂಸದ ರಮೇಶ ಕತ್ತಿ,ಮಂಗಲ ಅಂಗಡಿ,ಅಣ್ಣಾಸಾಹೇಬ ಜೊಲ್ಲೆ, ಇತರರಿದ್ದರು.