ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರನ್ನು ಅಣ್ಣಾಸಾಹೇಬ ಜೊಲ್ಲೆ ಸತ್ಕರಿಸಿದರು 
ಬೆಳಗಾವಿ

ಬೀರೇಶ್ವರ ಸಂಸ್ಥೆ ಎಲ್ಲ ರಾಜ್ಯಗಳಿಗೂ ವಿಸ್ತರಿಸಲಿ

ಆನಂದಕುಮಾರ ಭಮ್ಮನ್ನವರ

ಬೀರೇಶ್ವರ ಸಂಸ್ಥೆ ದೇಶದ ಎಲ್ಲ ರಾಜ್ಯಗಳಿಗೂ ವಿಸ್ತರಿಸಲಿ
| ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯ | ಮುಖ್ಯ ಕಚೇರಿ ಉದ್ಘಾಟನೆ ಸಮಾರಂಭ
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಗ್ರಾಹಕರ ವಿಶ್ವಾಸಾರ್ಹತೆಗೆ ಹೆಸರು ವಾಸಿಯಾಗಿರುವ ಬೀರೇಶ್ವರ ಸಹಕಾರಿ ಸಂಸ್ಥೆಯು ಬಹುರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಂಸ್ಥೆಯ ಪ್ರಾಮಾಣಿಕ ಸೇವೆಗೆ ಸಾಕ್ಷಿಯಾಗಿದ್ದು, ಸಂಸ್ಥೆಯು ದೇಶದ ಎಲ್ಲ ರಾಜ್ಯಗಳಲ್ಲೂ ಶಾಖೆಗಳನ್ನು ಆರಂಭಿಸಿ ಜನರಿಗೆ ಆರ್ಥಿಕ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ತಾಲೂಕಿನ ಯಕ್ಸಂಬಾದ ಪಟ್ಟಣದ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ನೂತನ ಮುಖ್ಯ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಈಚೆಗೆ ಭಾಗಿಯಾಗಿ ಅವರು ಮಾತನಾಡಿದರು.
ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ ಶಾ ಅವರು ಆಗಮಿಸಬೇಕಾಗಿತ್ತು. ಆದರೆ ಆಹಾರ ಕಲುಷಿತದಿಂದ ವಾಂತಿ, ಬೇಧಿ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗಲಿಲ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಹೇಬ ಜೊಲ್ಲೆ ಅವರ ಅವಿರತ ಪರಿಶ್ರಮ ಹಾಗೂ ಮಾರ್ಗದರ್ಶನ ಫಲವಾಗಿ ಸಂಸ್ಥೆಯು ಪ್ರಗತಿಯತ್ತ ಸಾಗುತ್ತಿದ್ದು,  ೪.೬೦ ಲಕ್ಷ ಸದಸ್ಯರು, ೫,೬೬೭ ಕೋಟಿ ಠೇವಣಿ ಸಂಗ್ರಹ, ೪,೦೩೮ ಕೋಟಿ ಸಾಲ ವಿತರಣೆ, ೫೧.೦೪ ಕೋಟಿ ನಿವ್ವಳ ಲಾಭದೊಂದಿಗೆ ೯,೭೦೦ ಕೋಟಿ ಒಟ್ಟು ವ್ಯವಹಾರ ನಡೆಸುವ ಮೂಲಕ ದಕ್ಷಿಣ ಭಾರತದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಗ್ರಾಮೀಣ ಭಾಗದಿಂದ ಆರಂಭವಾಗಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಿರುವುದು ಹೆಮ್ಮೆಯ ವಿಷಯ ಎಂದು ಶ್ಳಾಘಿಸಿದರು.
ಕನೇರಿ ಮಠದ ಅದೃಶ್ಯ ಕಾಡಸಿz್ದೆÃಶ್ವರ ಸ್ವಾಮೀಜಿ.ನಿಡಸೋಸಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ.ಸಂಸದ ಜಗದೀಶ ಶೆಟ್ಟರ.ಸಂಸ್ಥೆಯ ಸಂಸ್ಥಾಪಕ ಅಣ್ಣಾಸಾಹೇಬ ಜೊಲ್ಲೆ. ಶಾಸಕಿ ಶಶಿಕಲಾ ಜೊಲ್ಲೆ. ಬಸವಪ್ರಸಾದ ಜೊಲ್ಲೆ. ಪ್ರಧಾನ ವ್ಯವಸ್ಥಾಪಕ ಬಿ.ಎ.ಗುರವ ಇತರರಿದ್ದರು.