ಬಾಕ್ಸಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು. 
ಬೆಳಗಾವಿ

ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾಕತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಬೆಳಗಾವಿ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ

ಈಚೆಗೆ ಶಿವಮೊಗ್ಗದಲ್ಲಿ ನಡೆದ 14 ಮತ್ತು 17 ವಯೋಮಿತಿಯ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡೆಯಲ್ಲಿ ತಾಲೂಕಿನ ಕಾಕತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 

ಭೂಮಿಕಾ ಕುರುಬರ,ಸಮೀಕ್ಷಾ ಸುತಾರ,

ಲೋಕೇಶ್ ಕುರುಬರ ಅವರು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಮುಕುಂದ ಕಿಲ್ಲೇಕರ್, ಮಲ್ಲು ಕರಗುಪ್ಪಿ , ವಿಶಾಲ್ ನಿಂಬಾಳ್ಕರ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ ಅಕ್ಕಿ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ  ಮುಖ್ಯೋಪಾಧ್ಯಾಯ ಅಶೋಕ ಖೋತ ಮತ್ತು ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.