ಜಿಲ್ಲೆ

ಜಿಲ್ಲೆಯ ಇಬ್ಬರು ಶಿಕ್ಷಣಾಧಿಕಾರಿಗಳ ವರ್ಗಾವಣೆ

Belagavi - Ravi Arjun Gosavi


ಬೆಳಗಾವಿ : ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿ  ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ರಾಜ್ಯಾದ್ಯಂತ ಒಟ್ಟು 32 ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಬೆಳಗಾವಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ರೇವಕ್ಕ ಮಡಿವಾಳಯ್ಯ ಮಠದ ಅವರನ್ನು ಚಿಕ್ಕೋಡಿ ಡಿಡಿಪಿಐ ಕಚೇರಿಯ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ಹುದ್ದೆಗೆ ಹಾಗೂ ಬೆಳಗಾವಿ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ರವೀಂದ್ರ ತಿಪ್ಪಣ್ಣ ಬಳಿಗಾರ ಅವರನ್ನು ರಾಮದುರ್ಗದ ಕ್ಷೇತ್ರ ಶಿಕ್ಷಣಾಧಿಕಾರಿಯನ್ನಾಗಿ ವರ್ಗಾಯಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ  ಗುರುವಾರ ಆದೇಶಿಸಿದ್ದಾರೆ.