ಜಿಲ್ಲೆ

ಜಿಲ್ಲಾ ಖನಿಜ ಪ್ರತಿಷ್ಠಾನದಡಿ 7.85 ಕೋಟಿ ಅನುದಾನ‌ ಲಭ್ಯ

ಬೆಳಗಾವಿ : ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ಮಂಗಳವಾರ,  ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನ ಮ್ಯಾನೇಜಿಂಗ್ ಕಮಿಟಿ ಮತ್ತು ಆಡಳಿತ ಸಮಿತಿಯ ಸಭೆ ನಡೆಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ‌ಮಾತನಾಡಿ, ಜಿಲ್ಲೆ ಖನಿಜ ಪ್ರಯಿಷ್ಠಾನದಡಿ‌ 7.85 ಕೋಟಿ ರೂಪಾಯಿ ಅನುದಾನ ಲಭ್ಯವಿದ್ದು, ಇದಕ್ಕಾಗಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿರುತ್ತದೆ ಎಂದು  ವಿವರಿಸಿದರು.

ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿ, ಪ್ರಸ್ತಾವನೆ ಹಾಗೂ ಅನುದಾನದ ಸಮರ್ಪಕ ಹಂಚಿಕೆ ಕುರಿತು ಮುಂದಿನ ಸಭೆಯಲ್ಲಿ ವಿಸ್ತೃತವಾದ ವರದಿ ಮಂಡಿಸುವಂತೆ  ತಿಳಿಸಿದರು.

ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಆಸೀಫ್ ಸೇಠ್, ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು