ಜಿಲ್ಲೆ

ಸ್ಮಶಾನ ಒತ್ತುವರಿ ತೆರವುಗೊಳಿಸಿ ; ಜಿಲ್ಲಾಡಳಿತಕ್ಕೆ ಕರ್ನಾಟಕ ಭೀಮ ಸೇನೆ ಮನವಿ

Belagavi - Ravi Arjun Gosavi

ಬೆಳಗಾವಿ : ಮಾದಿಗ ಸಮಾಜದ ಜನರ ಶವಸಂಸ್ಕಾರಕ್ಕೆ ಮೀಸಲಿಟ್ಟ ಸ್ಮಶಾನ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು ಒತ್ತುವರಿ ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು. ಸ್ಮಶಾನ ಭೂಮಿಯಲ್ಲಿಯೇ ಅಂತ್ಯ ಸಂಸ್ಕಾರ ನೀಡಲು ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ ಸೇನೆ ವತಿಯಿಂದ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಯಬಾಗ ಪಟ್ಟಣದ ಮಾದಿಗ ಸಮಾಜದ ಮುಖಂಡರು ಹಾಗೂ ಕರ್ನಾಟಕ ಭೀಮ ಸೇನೆ ಪದಾಧಿಕಾರಿಗಳು, ನಾಗರಾಳ ಗ್ರಾಮದ ರಿ.ಸ.133/ಬ ಉತಾರದ 1 ಎಕರೆ 20 ಗುಂಟೆ ಜಮೀನು ಸ್ಮಶಾನಕ್ಕಾಗಿ 1995ರಲ್ಲೇ ಸರ್ಕಾರ ಮೀಸಲಿಟ್ಟಿದೆ. ಆದರೆ, ಕೆಲವರು ಅಲ್ಲಿ ಮನೆ ನಿರ್ಮಿಸಿಕೊಂಡು, ಅಂತ್ಯ ಸಂಸ್ಕಾರಕ್ಕೂ ಅವಕಾಶ ನೀಡದೇ ದಶಕಗಳ ಕಲಾ ನಿರಂತರ ಶೋಷಣೆ ಮಾಡುತ್ತಲೇ ಬಂದಿದ್ದಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹತ್ತಾರು ಬಾರಿ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ಮಶಾನ ಭೂಮಿ ಅತಿಕ್ರಮಿಸಿ ಅಲ್ಲಿಯೇ ಮನೆ ನಿರ್ಮಿಸಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ತಮ್ಮದು ಎಂದು ದಾಖಲೆ ತೋರಿಸುತ್ತೊದ್ದಾರೆ. ಅಂತ್ಯಸಂಸ್ಕಾರಕ್ಕೂ ಅವಕಾಶ ನೀಡದೇ 28 ವರ್ಷಗಳಿಂದಲೂ ಶೋಷಣೆ ಮಾಡಲಾಗುತ್ತಿದ್ದು, ಸ್ಮಶಾನ ಭೂಮಿ ಅತಿಕ್ರಮನಕ್ಕೆ ಸಹಕರಿಸಿದ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಲೆಕ್ಕಾಧಿಕಾರಿ ಸೇರಿದಂತೆ ಸಂಬಂಧಿತ ಎಲ್ಲ ಅಧಿಕಾರಿಗಳ ಮೇಲೆ ಶಿಸ್ತು ಕಾನೂನು ಕ್ರಮ ಜರುಗಿಸಿ, ನ್ಯಾಯ ಒದಗಿಸಬೇಕು. ಇಲ್ಲವಾದರೇ, ರಾಯಬಾಗ ಬಂದ್ ಮಾಡಿ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿಧಿಷ್ಠಾವದಿ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಧ್ಯಕ್ಷ ಪ್ರವೀಣ ಮಾದರ, ಉಪಾಧ್ಯಕ್ಷ ಅಕ್ಷಯ ಕೆ.ಆರ್. ಕಾರ್ಯಧ್ಯಾಕ್ಷ ಮಲ್ಲಪ್ಪ ಅಕ್ಕಮರಡಿ, ವಿಜಯ ಕೋಟ್ಕಾರ್, ಮಹೇಶ ಶೀಗಿಹಳ್ಳಿ, ಶಿವು ನಾಯಕ, ಆಕಾಶ ಬೇವಿನಕಟ್ಟಿ, ವಿನೋದ ಕರಪೆ, ಮಯೂರ ಸೇರಿದಂತೆ ಇತರರಿದ್ದರು.