ಜಿಲ್ಲೆ

ಮನೆಯಲ್ಲೇ ಮತದಾನ ಮಾಡಿ ; ಗೌಪ್ಯತೆ ಕಾಪಾಡಿಕೊಂಡು ಚಿತ್ರೀಕರಣ

ಬೆಳಗಾವಿ : ಜಿಲ್ಲೆಯಲ್ಲಿನ ಕೆಲವು ವಿಶೇಷ ಚೇತನರು ಹಾಗೂ 80 ವರ್ಷ ಮೇಲ್ಪಟ್ಟ ಮತದಾರರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮತದಾನದ ದಿನದಂದು ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ಮತದಾರರ ಮನೆಗೆ ತೆರೆಳಿ ಮತದಾನದ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಪಾರದರ್ಶಕವಾಗಿ ಮತದಾನ ಮಾಡಿಸಲಾಗುತ್ತದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಪಂ ಸಿಇಒ ಹರ್ಷಲ್ ಬೋಯರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅಂದಾಜು 1 ಲಕ್ಷ 80 ವರ್ಷ ಮೆಲ್ಪಟ್ಟ ಮತದಾರು ಮತ್ತು 40 ಸಾವಿರ ವಿಶೇಷ ಚೇತನರು ಮತದಾರರು ಇರುವದರಿಂದ ಅವರಿಗೆ ಮತದಾನಕ್ಕೆ ಬೇಕಾಗುವ ಎಲ್ಲ ವ್ಯವಸ್ಥೆಯನ್ನು ಕಲ್ಪಿಸುವ ಜತೆಗೆ ಪಾರದರ್ಶಕತೆ ಹಾಗೂ ಮತದಾನದ ಗೌಪ್ಯತೆ ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದಿದ್ದಾರೆ.
 ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಹಿನ್ನೆಯಲ್ಲಿ ಮತದಾನ ಜಾಗೃತಿ ಕುರಿತು ಜಿಲ್ಲೆಯಾದ್ಯಾಂತ ವಿವಿಧ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಳೆದ ಬಾರಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆಯ ಕುರಿತು ಚಿತ್ರಕಲಾ ಸ್ಪರ್ಧೆ ಪ್ರಬಂಧ ಸ್ಪರ್ಧೆ. ವಿವಿಧ ಸರ್ಕಾರಿ ಇಲಾಖೆಯ ಸಿಬ್ಬಂದಿಗಳಿಅದ ಬೈಕ್ ಜಾಥಾ, ಕ್ಯಾಂಡಲ್ ಜಾಥಾ, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಹಾಗೂ ವಿಶೇಷ ಚೇತನರ ಬೈಕ್ ರ‌್ಯಾಲಿ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೇ, ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ತಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು. ಮೇ-10ರ ಮತದಾನ ದಿನದಂದು ವಿಶೇಷ ಚೇತನರು ಮತ್ತು ಇಳಿ ವಯಸ್ಸಿನ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶ್ಯಾಮಿಯಾನ ಮೂಲಕ ನೆರೆಳಿನ ವ್ಯವಸ್ಥೆ ಹಾಗೂ ಶೌಚಾಲಯದ ವ್ಯವಸ್ಥೆ ಮತ್ತು ಅಂಗವಿಕಲರಿಗೆ ವೀಲ್‌ಚೇರ್ ವ್ಯವಸ್ಥೆ ಮಾಡಲಾಗುತ್ತಿದೆ. ಸುಗಮ ಮತ್ತು ಸುವ್ಯವಸ್ಥೆಯಿಂದ ಮತದಾನ ಜರಗಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯೊಂದಿಗೆ ಸಾರ್ವಜನಿಕರು ಮತ್ತು ಮತದಾರರು ಸಹಕರಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.