ಪುತ್ತೂರು ಗ್ರಾಮಾಂತರ: ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಮತ್ತು ಯಾವುದೇ ಸೌಲಭ್ಯಗಳ ಕೊರತೆ ಇಲ್ಲ. ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ. ವಿದ್ಯಾರ್ಥಿಗಳ ಕೊರತೆಯ ಕಾರಣಕ್ಕೆ ಯಾವುದೇ ಸರ್ಕಾರಿ ಶಾಲೆ ಮುಚ್ಚುವಂತಾಗಬಾರದು. ಸರ್ಕಾರಿ ಶಾಲೆಗಳು ಮುಚ್ಚಿದರೆ ಮುಂದೆ ದೊಡ್ಡಮಟ್ಟದ ಪರಿಣಾಮವನ್ನು ಎದುರಿಸಬೇಕಾಗಿ ಬರಬಹುದು ಎಂದು ಶಾಸಕ ಅಶೋಕ್‌ಕುಮಾರ್ ರೈ ಅವರು ಹೇಳಿದರು.
ಬೆಳ್ಳಿಪ್ಪಾಡಿ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ಎಸ್‌ಡಿಎಂಸಿ ಅಧ್ಯಕ್ಷ ವಾಸುದೇವ ಆಚಾರ್ಯ, ಉಪಾಧ್ಯಕ್ಷೆ ಪ್ರೇಮಲತಾ ಕುಂಟಾಪು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ರಾಮಣ್ಣ ಗೌಡ ಮುಂಡೋಳೆ, ಉಷಾ ಲಕ್ಷ್ಮಣ ಪೂಜಾರಿ, ರಾಮಚಂದ್ರ ಪೂಜಾರಿ, ಶಿಕ್ಷಕಿ ಸುಮಿತ್ರ, ಪದ್ಮನಾಭ ಶೆಟ್ಟಿ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ನೀಲಪ್ಪ ಗೌಡ ಬೆಳ್ಳಿಪ್ಪಾಡಿ, ಕಾರ್ತಿಕ್ ರೈ ಬೆಳ್ಳಿಪ್ಪಾಡಿ, ಸುಂದರ ಸಾಲಿಯಾನ್, ಶಾಂತಿನಗರ ಶಾಲೆಯ ಮುಖ್ಯಶಿಕ್ಷಕ ವಿಷ್ಣುಪ್ರಸಾದ್, ನಿವೃತ್ತ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಯಶೋದ ಸ್ವಾಗತಿಸಿ ವಂದಿಸಿದರು.