ಜಿಲ್ಲೆ

ಹಿಟ್ಲರ್ ಗೆ ಹೋಲಿಸುವುದು ಸರಿಯಲ್ಲ, ಶಾಸಕ ಬೆಲ್ಲದ ಹೇಳಿಕೆ

Dharwada - Basavaraj Idli

ಹುಬ್ಬಳ್ಳಿ: ಕೇಂದ್ರ ಸಚಿವ ಜೋಶಿ ಅವರು ಎಲ್ಲರ ಜತೆ ಅತ್ಯಂತ ಪ್ರೀತಿಯಿಂದ ಮಾತನಾಡುವ, ಎಲ್ಲರಿಗೂ ಸಿಗುವ ನಾಯಕ, ಅವರನ್ನು ಹಿಟ್ಲರ್ಗೆ ಹೋಲಿಸುವುದು ಸರಿಯಲ್ಲ ಎಂದು ಶಾಸಕ ಅರವಿಂದ ಬೆಲ್ಲದ ಅವರು ಕಾಂಗ್ರೆಸ್ ನಾಯಕ ವಿನಯ ಕುಲಕಣಿರ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ ಕುಲಕಣಿರ್ ಅವರು ಬಹಳ ಸಿಟ್ಟಿನಲ್ಲಿ ಹೀಗೆ ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಎಲ್ಲ ಸಂಘ ಸಂಸ್ಥೆಗಳಲ್ಲಿ ಬೆಳೆದಿದ್ದಾರೆ. ಹಿಂದಿ ಪ್ರಚಾರ ಸಭೆಯಲ್ಲಿ ನಮ್ಮ ಅಜ್ಜ ಸೇರಿದಂತೆ ಹಲವು ಮುಖಂಡರು ಕೆಲಸ ಮಾಡಿದ್ದಾರೆ ಎಂದರು.

ಶ್ರೀದಿಂಗಾಲೇಶ್ವರ ಸ್ವಾಮೀಜಿಗಳಿಗೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಲಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಾಹ್ಯ ಬೆಂಬಲವಾದರೂ ಕೊಡಲಿ ಅಥವಾ ಕಾಂಗ್ರೆಸ್ ಪಕ್ಷದಿಂದಲಾದರೂ ಸ್ಪರ್ಧಿಸಲಿ ಅದು ಅವರಿಗೆ ಬಿಟ್ಟಿದ್ದು, ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ನಾವು ಜನರ ಬಳಿ ಹೋಗುತ್ತೇವೆ ಎಂದರು.