ಜಿಲ್ಲೆ

ಬಳ್ಳಾರಿ: 5 ಕೋಟಿ ನಗದು, 3 ಕೆಜಿ ಚಿನ್ನ, 68 ಕೆಜಿ ಗಟ್ಟಿ ಬೆಳ್ಳಿ, 103 ಕೆಜಿ ಆಭರಣ ವಶಕ್ಕೆ!

ಬಳ್ಳಾರಿ: ಲೋಕಸಭಾ ಚುನಾವಣೆ ವೇಳೆ ಬಳ್ಳಾರಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ಖಾಕಿಪಡೆ, ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ನಗರದ ಬ್ರೂಸ್ ಪೇಟೆ ಠಾಣೆ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೇ ಹಣವನ್ನ ಕಾರಿನಲ್ಲಿ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಎಲ್ಲ ವಸ್ತುಗಳನ್ನು ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು. ಈ ಪ್ರಕರಣದಲ್ಲಿ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಮನೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

98 ಕೆಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಪ್ರಕರಣ ಹಸ್ತಾಂತರ ಮಾಡುತ್ತೇವೆ. ಈಗಗಲೇ ನರೇಶ್ ಸೋನಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಎಸ್ಪಿ ಹೇಳಿದರು.