ಪಟ್ಟಣದ ರಸ್ತೆ ಸಾರಿಗೆ ಸಂಸ್ಥೆ ನಿಲ್ದಾಣದಲ್ಲಿ ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿ ಪವನಕುಮಾರ ಕರ್ತವ್ಯ ನಿರತ ಬಸ್ ಚಾಲಕ ಭೀಮಣ್ಣ ಮೇಲೆ ಹಲ್ಲೆ ಮಾಡಿದ ಘಟನೆ ಇತ್ತೀಚೆಗೆ ನಡೆದಿದೆ.
ಬಳ್ಳಾರಿಯಿಂದ ಕುರುಗೋಡಿಗೆ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪವನಕುಮಾರ ಬಸ್‌ನಲ್ಲಿ ಗಟ್ಟಿಯಾಗಿ ಮಾತನಾಡುತ್ತಿದ್ದ. ಇದನ್ನು ಪ್ರಶ್ನಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಸ್ ಕುರುಗೋಡು ನಿಲ್ದಾಣಕ್ಕೆ ಬಂದ ತಕ್ಷಣ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಯುವಕನ ವಿರುದ್ಧ ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.