ಜಿಲ್ಲೆ

ಅಂಬೇಡ್ಕರ್ ಅಭಿವೃದ್ಧಿಯ ಹರಿಕಾರ

ಬಳ್ಳಾರಿ : ಭಾರತವು ಸಮಾಜವಾದ ತತ್ವ, ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ ಎಂದು ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ (ಸ್ವಾಯತ್ತ) ಕಾಲೇಜಿನ ಪ್ರಾಚಾರ್ಯ ಡಾ.ಪ್ರಹ್ಲಾದ ಚೌದರಿ ಹೇಳಿದರು.

ನಗರದ ಎಸ್ ಎಸ್ಎ ಕಾಲೇಜಿನಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಅದೇ ದಿನದಂದು ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಂಡಿತು. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು ಎಂದು ಹೇಳಿದರು.