ಜಿಲ್ಲೆ

ನೂತನ ಕೃಷಿ ಕಾಯ್ದೆಗಳ ಹಿಂಪಡೆಯಲು ಆಗ್ರಹ: ಬಳ್ಳಾರಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ

ಬಳ್ಳಾರಿ: ನೂತನ ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸದಸ್ಯರು ನಗರದ ಡಿಸಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಹೊಸ ಕೃಷಿ ಕಾಯ್ದೆಗಳ ರದ್ದತಿಗಾಗಿ ದೇಹಲಿಯಲ್ಲಿ ಏಳು ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ, ಬಂಡವಾಳ ಶಾಹಿಗಳಿಗೆ ಪ್ರಾಮುಖ್ಯತೆ ನೀಡುವುದನ್ನು ಬಿಟ್ಟು ರೈತ ಹಿತಕಾಯುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ರೂಪಿಸಿದ ಕುತಂತ್ರಗಳನ್ನು ನೋಡಿದರೆ, 43 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ನೆನಪಾಗುತ್ತದೆ. ಸರ್ಕಾರ ಎಲ್ಲ ಅಸ್ತ್ರಗಳನ್ನು ಬಳಸಿ ರೈತರ ಒಗ್ಗಟ್ಟನ್ನು ಮುರಿಯುತ್ತಿದೆಯೇ ಹೊರತು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.