ಬಳ್ಳಾರಿ : ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕ ಸಂತೋಷ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಶೇ.90 ರಂತೆ ಗರಿಷ್ಠ 2.00 ಹೆಕ್ಟೇರ್ ವರೆಗೆ ಸಹಾಯಧನ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ. ಮಾಹಿತಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಬಹುದು.
-----------