ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ ಸಹಯೋಗದೊಂದಿಗೆ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ 3 ದಿನಗಳ ಕಮ್ಮಟವನ್ನು ಏಪ್ರಿಲ್ 21, 22 ಮತ್ತು 23 ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 45 ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏ.05 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ಕರಿಯಪ್ಪ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---