ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಕಂಪ್ಲಿ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯ ಠಾಕ್ರಾ ನಾಯ್ಕ ತಿಳಿಸಿದ್ದಾರೆ.

ಕಂಪ್ಯೂಟರ್ ಸೈನ್ಸ್, ಎಲೆಕ್ಟಾನಿಕ್ಸ್ ಅಂಡ್ ಕಮ್ಯುನಿಕೇಷನ್ಸ್ ಮೆಕ್ಯಾನಿಕಲ್ ಮತ್ತು ಸಿವಿಲ್ ಕೋರ್ಸ್‌ಗಳು ಲಭ್ಯವಿದ್ದು, ಮೆರಿಟ್ ಆಧಾರದ ಮೇಲೆ ಆಫ್ ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಪ್ರವೇಶ ಪ್ರಕ್ರಿಯೆಯು ಮೇ 11 ರಿಂದ 27 ರ ವರೆಗೆ ನಡೆಯಲಿದೆ. ಮಾಹಿತಿಗೆ ಪ್ರಾಚಾರ್ಯರ ಕಚೇರಿ ಅಥವಾ ದೂ.08394-250455, ಮೊ.9845181482, 9686412428, 9482994340, 9606350770, 9731979865, 9739147452 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.