ಜಿಲ್ಲೆ

ಅರ್ಜಿ ಆಹ್ವಾನ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸ್ತಕ ಸಾಲಿಗೆ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ವಿದ್ಯಾರ್ಹತೆವುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅತಿಥಿ ಶಿಕ್ಷಕರ ಹುದ್ದೆಗೆ ಬಿಎಸ್ಸಿ , ಬಿಇಡಿ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಎಂಎ, ಬಿಇಡಿ ಅಥವಾ ಎಂಎಸ್ಸಿ , ಬಿಇಡಿ ವಿದ್ಯಾರ್ಹತೆ ಹೊಂದಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗೆ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೊ.7353346069 ಮತ್ತು ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಮಾದರಿ ಪದವಿ ಪೂರ್ವ ಕಾಲೇಜಿನ ಮೊ.8861623814 ಅಥವಾ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

------------