ಜಿಲ್ಲೆ

ಬಳ್ಳಾರಿ : ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Bellari - Heera Nayak

ಬಳ್ಳಾರಿ: ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ನಮೂನೆಯ ಅರ್ಜಿಯನ್ನು ತಮ್ಮ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅಥವಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಜುಲೈ 24ರೊಳಗಾಗಿ ಸಂಬಂಧಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯ ಅಥವಾ ದೂ.08392-276224 ಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.