ಬಳ್ಳಾರಿ : ನಗರದ ವಿವಿಧಡೆ ಜಿಲ್ಲಾ ಬಾಲ ಕಾರ್ಮಿಕ ಯೋಜನೆ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಅನಿರೀಕ್ಷಿತ ದಾಳಿ ನಡೆಸಿ ನಾಲ್ವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.
ಒಟ್ಟು 04 ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿ ಸಂಬಂಧಿಸಿದ ಶಾಲೆಗಳಲ್ಲಿ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಬಾಲಕಾರ್ಮಿಕ ಕಾಯ್ದೆ 1986 ರ ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.