ಜಿಲ್ಲೆ

ವಿವಿಧೆಡೆ ದಾಳಿ, ಮೂವರು ಬಾಲಕಾರ್ಮಿಕರು ರಕ್ಷಣೆ

ಬಳ್ಳಾರಿ : ಪಟ್ಟಣದ ಆದೋನಿ ರಸ್ತೆ, ದೇಶನೂರು ರಸ್ತೆ, ಸಿಂಧನೂರು ರಸ್ತೆ, ಬಳ್ಳಾರಿ ರಸ್ತೆ ಮತ್ತು ಇತರೆ ಸ್ಥಳಗಳಲ್ಲಿ ಗ್ಯಾರೇಜ್, ಮೆಕ್ಯಾನಿಕ್ ಶಾಪ್ ಹಾಗೂ ಇತ್ಯಾದಿ ಉದ್ದಿಮೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ ಮೂವರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಯೋಜನೆಯ ಯೋಜನಾಧಿಕಾರಿ ಮೌನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಶಿಕ್ಷಣ ಇಲಾಖೆಗೆ ಒಪ್ಪಿಸಿ ಸಂಬಂಧಿಸಿದ ಶಾಲೆಗಳಲ್ಲಿ ಅವರ ವಯಸ್ಸಿನ ದಾಖಲೆ ಪಡೆದ ನಂತರ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

====