ಬಳ್ಳಾರಿ : ದೇಶವು ಸಾಂಪ್ರದಾಯಿಕ ಗುಲಾಮಗಿರಿಯಿಂದ ಮುಕ್ತವಾದರೆ ಮಾತ್ರ ಸಂಪೂರ್ಣ ಸ್ವಾತಂತ್ರ್ಯ ಹೊಂದಬಹುದು ಎಂದು ಸಾಹಿತಿ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಹೇಳಿದರು.
ನಗರದ ಗಾಲಿ ರುಕ್ಮಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣ ಕಾಲೇಜು ಸಭಾಂಗಣದಲ್ಲಿ ವಿಎಸ್‌ಕೆ ವಿವಿ ಸಹಯೋಗದೊಂದಿಗೆ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹನ್ನೇರಡನೆ ಶತಮಾನದಲ್ಲಿ ಬಸವಣ್ಣನವರ ಕ್ರಾಂತಿಕಾರಕ ಮಾನವ ಧರ್ಮ ಹೊಸ ವೈಚಾರಿಕತೆಯೆಡೆಗೆ ಸಾಗಿತ್ತು. ಭಾಷೆ, ಸಂಸ್ಕೃತಿ, ಪರಂಪರೆಯಲ್ಲಿ ಚಳುವಳಿಗಳಿಂದ ಮೂಡಿದ ಹೊಸ ಬದಲಾಣೆಯಿಂದಾಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಗುರುತಿಸಿದೆ. ಕೇವಲ ಜನಾಂಗ, ರಾಜಕೀಯದಿಂದ ದೇಶಕ್ಕೆ ಸ್ವಾತಂತ್ರೃ ದೊರೆತಿದೆ ಎನ್ನುವುದಕ್ಕಿಂತ ಅಭಿವೃದ್ಧಿಪರ ವಾಸ್ತವಿಕತೆಯಲ್ಲಿ ಜನರು ಜೀವಿಸಿದಾದ ನಿಜವಾದ ಸ್ವಾತಂತ್ರೃದ ಅನುಭವ ಸಿಗುತ್ತದೆ. ಮಹಾನ್ ವ್ಯಕ್ತಿತ್ವವುಳ್ಳ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಅವರ ವೈಚಾರಿಕ ತತ್ವಗಳಿಂದ ಇಂದು ದೇಶವನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು.
ವಿಎಸ್‌ಕೆ ವಿವಿ ಕುಲಪತಿ ಪ್ರೊ. ಎಂ.ಮುನಿರಾಜು ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯ ಭರಿತ ಕೋರ್ಸುಗಳನ್ನು ಕಲಿತಲ್ಲಿ ಭವಿಷ್ಯದಲ್ಲಿ ಅವು ಉದ್ಯೋಗ ಸೃಷ್ಟಿಸುತ್ತವೆ. ಇನ್ಪೋಸಿಸ್‌ನ ನಾರಾಯಣ ಮೂರ್ತಿ, ಅಂಬಾನಿ, ಅದಾನಿಯವರ ಸಾಧನೆಯನ್ನು ವಿದ್ಯಾರ್ಥಿಗಳು
ತಿಳಿದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಕೌಶಲ್ಯಾಧಾರಿತ ಕೋರ್ಸಗಳನ್ನು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು
ಎಂದರು.