ಜಿಲ್ಲೆ

ಪುಸ್ತಕದ ಕಡೆ ಆಸಕ್ತಿವಹಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ಕವಿಯ ಕಲ್ಪನೆ ಮತ್ತೊಂದು ಪ್ರಪಂಚದ ಸೃಷ್ಟಿ ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ.ಸುಜಾತ ಜಂಗಮಶೆಟ್ಟಿ ಹೇಳಿದರು.

ನಗರದ ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ರಂಗ ಜಂಗಮ ಸಂಸ್ಥೆ , ಆದಿವಾಸಿ ಸಾಹಿತ್ಯ ಕಲೆ ಮತ್ತು ಸಂಶೋಧನಾ ಟ್ರಸ್ಟ್ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ಪ್ರೊ.ಎನ್. ಶಾಂತನಾಯ್ಕ ಅವರ ಕಾವ್ಯದಲ್ಲಿ ದಲಿತರ ಮತ್ತು ಬುಡಕಟ್ಟು ಸಮುದಾಯಗಳ ತಳಮಳಗಳು ಎಂಬ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಲ್ಲ ಕಲೆಗಳು ಮುಂದಿನ ಪೀಳಿಗೆಗೆ ತಲುಪಬೇಕು. ಯುವಕರು ರಂಗಭೂಮಿ ಸಂಗೀತಕ್ಕೆ ಹೆಚ್ಚಿನ ಆಸಕ್ತಿ ವಹಿಸಿ ಪುಸ್ತಕಗಳನ್ನ ಓದುವುದರ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ರಂಗಭೂಮಿಗೆ ಸಂಬಂಧಪಟ್ಟ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಲಿ ಎಂದರು.

ಕಾಲೇಜು ಪ್ರಾಚಾರ್ಯ ಡಾ.ದೇವರಿಂಟಿ ಸುಧಾಕರ್ ಮಾತನಾಡಿ, ಪ್ರೊ.ಶಾಂತನಾಯ್ಕೊ ಅವರ ಕಥೆ, ಕವನ, ಸಾಹಿತ್ಯ, ನಾಟಕ, ಸಂಗೀತ, ಗಜಲ್ ಎಲ್ಲವುಗಳನ್ನು ಪುಸ್ತಕ ರೂಪದಲ್ಲಿ ಸಾಹಿತ್ಯ ಲೋಕಕ್ಕೆ ಕೊಡುಗೆಯಾಗಿ ನೀಡುತ್ತಿರುವುದು ಸಂತಸ ವಿಷಯವಾಗಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.