ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರವಾಗಿ ಶಾಸಕ ರೇಣುಕಾಚಾರ್ಯ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಯಾವುದೇ ಬೆಲೆಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇಣುಕಾಚಾರ್ಯ ಹತ್ತು ಬಾರಿ ಹೇಳಿದ್ದನ್ನೇ ಹೇಳುತ್ತಾರೆ. ಅವರ ಸಹಿ ಸಂಗ್ರಹಕ್ಕೆ ಬಿಜೆಪಿಯಲ್ಲಿ ಬೆಲೆಯಿಲ್ಲ. ಬಿಜೆಪಿಯಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ, ಸಿಎಂ ಬದಲಾವಣೆ ಏನಿದ್ದರೂ ಹೈಕಮಾಂಡ್ ಕೈಯಲ್ಲಿದೆ ಎಂದರು.