ಜಿಲ್ಲೆ

ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪರಮಾಧಿಕಾರಿ ಹೊಂದಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸಿಎಂ ಅವರು ಸಚಿವರೊಂದಿಗೆ ಕರೆದಿರುವ ಔತಣಕೂಟವು ಹೊಸದು ಏನಿಲ್ಲ. ಸಚಿವರಿಗೆ ಅಭಿವೃದ್ಧಿ ಬಗ್ಗೆ ಮಾರ್ಗದರ್ಶನ ಮಾಡಲು ಕರೆದಿದ್ದು ನಾನು ಹೋಗುವೆ ಎಂದರು.

ಬಿಜೆಪಿ ನಾಯಕರು ಸುಳ್ಳು ಹೇಳುವದರಲ್ಲಿ ನಿಸ್ಸೀಮರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ಅಪರಾಧ ಹಾಗೂ ಅಕ್ರಮ ಬಗ್ಗೆ ಅವರಿಗೆ ಕನಸು ಬೀಳುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಷ್ಟು ಅಭಿವೃದ್ಧಿ ಕಾರ್ಯಗಳು, ಬಿಜೆಪಿ ಯಾವುದಾದರೂ ಮಾಡಿದ್ದರೆ ಸಾಕ್ಷಿ ತೋರಿಸಲಿ ಎಂದು ಸವಾಲು ಹಾಕಿದರು. ಬಿಜೆಪಿಯು ರಾಜ್ಯದ ಅಭಿವೃದ್ಧಿ ನೋಡಿ ಹತಾಶೆ ಮನೋಭಾವದಿಂದ ಸುಖಾಸುಮ್ಮನೆ ಆರೋಪಿಸಿ ಜನರ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.