ಜಿಲ್ಲೆ

ಕರೊನಾ ಕಟ್ಟಿಹಾಕಲು 30ರವರೆಗೆ ಲಾಕ್‌ಡೌನ್ ವಿಸ್ತರಣೆಯಾಗಲಿ: ಶಾಸಕ ಸೋಮಶೇಖರ ರೆಡ್ಡಿ ಅಭಿಪ್ರಾಯ

ಬಳ್ಳಾರಿ: ಕರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರಬೇಕೆಂದರೆ ಜೂ.30 ರವರೆಗೆ ಲಾಕ್‌ಡೌನ್ ವಿಸ್ತರಿಸಬೇಕು ಎಂದು ಎಂದು ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕರೊನಾ ಎರಡನೇ ಅಲೆ ಸದ್ಯದ ಮಟ್ಟಿಗೆ ತಗ್ಗಿದೆ ಎಂದು ಲಾಕ್‌ಡೌನ್ ಸಡಿಲಗೊಳಿಸಿದರೆ ಮತ್ತೆ ಅದರ ವೇಗ ಜಾಸ್ತಿಯಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದರೆ ಕರೊನಾ ಮುಕ್ತ ರಾಜ್ಯ ಅಥವಾ ಜಿಲ್ಲೆಯನ್ನಾಗಿಸಬಹುದು. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ ಎಂದರು.