ಬಳ್ಳಾರಿ: ಕೃಷಿ ಇಲಾಖೆಯಿಂದ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಖಾಸಗಿ ನಿವಾಸಿಗಳಿಂದ ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸಲು ಇ-ಆಡಳಿತದಿಂದ ಆ್ಯಪ್ ಅಭಿವೃದ್ಧಿಪಡಿಸಿದ್ದು, ಸೆ.30 ರವರೆಗೆ ಬೆಳೆ ಸಮೀಕ್ಷೆ ಅಪ್ಲೋಡ್ ಮಾಡಲು ಕೊನೆಯ ದಿನವಾಗಿದೆ. ಮಾಹಿತಿಗೆ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---