ಜಿಲ್ಲೆ

ದ್ವಿಭಾಷ ನೀತಿ ಜಾರಿಗೆ ಆಗ್ರಹ

ಎಸ್.ಎರ್ರಿಸ್ವಾಮಿ

ಬಳ್ಳಾರಿ ; ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಅಂಗ್ಲ ಭಾಷೆಯನ್ನು ಕಡ್ಡಾಯಗೊಳಿಸುವ ದ್ವಿಭಾಷ ನೀತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಹಾಗೂ ಟಿ.ನಾರಾಯಣಗೌಡ )ಬಣದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

ರಾಜ್ಯದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು. ರಾಜ್ಯ ಮತ್ತು ಕೇಂದ್ರೀಯ ಶಿಕ್ಷಣ ಶಾಲೆಗಳಿಗೆ ಏಕರೂಪದ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ಸಿಬಿಎಎಸ್, ಇಐಸಿಎಸ್‌ಇ ಶಾಲೆಗಳಲ್ಲಿಯೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಡ್ಡಾಯಗೊಳಿಸಬೇಕು. ಕನ್ನಡ ಮಾಧ್ಯಮ ಶಾಲೆಗಳನ್ನು ಬಲಪಡಿಸಿ, ಉತ್ತಮ ಗುಣಮಟ್ಟದ ಅಂಗ್ಲ ಶಿಕ್ಷಣ ನೀಡಬೇಕು. ತ್ರಿಭಾಷೆ ನೀತಿಯಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಅನಗತ್ಯ ಒತ್ತಡ ತೆಗೆದುಹಾಕಬೇಕು. ತಮಿಳುನಾಡು ಮತ್ತು ಮಹಾರಾಷ್ಟ್ರದಂತಹ ರಾಜ್ಯದಲ್ಲಿ ದ್ವಿಭಾಷಾ ನೀತಿಯನ್ನು ಅನುಸರಿಸುವ ಮೂಲಕ ರಾಜ್ಯವು ತನ್ನ ಭಾಷಿಕ ಗುರುತನ್ನು ರಕ್ಷಿಸಬೇಕು ಎಂದು ಸಂಘಟನಕಾರರು ಒತ್ತಾಯಿಸಿದರು. ಬಳಿಕ ಎಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.